ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೬-೨೭ನೇ ಸಾಲಿನ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಈ ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ವರ್ಗ: ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಹರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುವುದರಿಂದ ಪ್ರತ್ಯೇಕವಾಗಿ ಯಾವುದೇ ತರಬೇತಿ ಭತ್ಯೆ ನೀಡಲಾಗುವುದಿಲ್ಲ.
ಆಗಸ್ಟ್ ೩ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿsevಚಿsi
ಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಹೆಚ್ಚಿನ ಮಾಹಿತಿಗಾಗಿ ೮೦೫೦೭೭೦೦೦೪ ಸಂಖ್ಯೆಯನ್ನು ಸಂಪರ್ಕಿಸಬಹುದು ಪರೀಕ್ಷಾ ಕೇಂದ್ರ, ದಿನಾಂಕ ಮತ್ತು ಸಮಯದ ವಿವರಗಳನ್ನು ಮುಂದಿನ ದಿನಗಳಲ್ಲಿ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
