ಉದಯರಶ್ಮಿ ದಿನಪತ್ರಿಕೆ
ಇಂಡಿ: ನಗರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಭಿಜಿತ ಸಮಗಾರ ಮನೆಗೆ ಶಾಸಕ ಯಶವಂತರಾಯಗೌಡ ಪಾಟೀಲ ಶುಕ್ರವಾರ ಸಾಯಂಕಾಲ ಭೇಟಿ ನೀಡಿ ಮೃತ ಅಭೀಷೇಕ ತಂದೆ ತಾಯಿಗಳಿಗೆ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತ ಅಭೀಷೇಕ ಬೆಳೆಯುವ ಹಂತದಲ್ಲಿ ಇಂತಹ ದುಸ್ಸಾಸಕ್ಕೆ ಕೈ ಹಾಕಿ ಜೀವಕಳೆದುಕೊಂಡಿದ್ದಾನೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ.ರು
ವೈ.ವಿ. ಪಾಟೀಲ ಫೌಂಡೇಶನ್ ವತಿಯಿಂದ ಕುಟುಂಬಕ್ಕೆ ೨ ಲಕ್ಷ ಸಹಾಯ ಒದಗಿಸುತ್ತೇನೆ ಇದಲ್ಲದೆ ಮೃತ ಅಭೀಜೀತ ತಂದೆ ಗುತ್ತಿಗೆ ಆಧಾರದಲ್ಲಿ ವಸತಿ ನಿಲಯದಲ್ಲಿ ಕೆಲಸ ಮಾಡುವುದಾದರೆ ಉದ್ಯೋಗ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರಾಜಶೇಖರ ದೈವಾಡಗಿ, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಭೀಮಣ್ಣಾ ಕೌಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ ಸೇರಿದಂತೆ ಮಾವಿನಹಳ್ಳಿ ಗ್ರಾಮದ ಮುಖಂಡರು ಇದ್ದರು.

