ಉದಯರಶ್ಮಿ ದಿನಪತ್ರಿಕೆ
ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠಕ್ಕೆ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಅವರು ಶುಕ್ರವಾರರಂದು ಬೆಟ್ಟಿ ನೀಡಿ ಶ್ರೀ ಖಾಸ್ಗತೇಶ್ವರರ ಹಾಗೂ ವಿರಕ್ತಶ್ರೀಗಳ ಗದ್ದುಗೆಯ ದರ್ಶನ ಪಡೆದು ಮಹಾಪೂಜೆ ಸಲ್ಲಿಸಿದರಲ್ಲದೇ ಶ್ರೀಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರಿಂದ ಆಶಿರ್ವಾದ ಪಡೆದುಕೊಂಡರು.
ಶ್ರೀ ಖಾಸ್ಗತೇಶ್ವರ ಮಠದ ಜಾತ್ರೋತ್ಸವವು ಪ್ರಾರಂಭಗೊಂಡಿದ್ದರಿಂದ ಮಠಕ್ಕೆ ಬೆಟ್ಟಿ ನೀಡಿದ ಶಾಸಕ ರಾಜುಗೌಡ ಪಾಟೀಲ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಮಾತನಾಡಿದ ಶಾಸಕ ರಾಜುಗೌಡರು ಶ್ರೀ ಖಾಸ್ಗತ ಮಠವು ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿ ಬೆಳೆಯುತ್ತಾ ಸಾಗಿದೆ ಶ್ರೀಮಠವು ಮುಂಬರುವ ದಿನಗಳಲ್ಲಿ ಇನ್ನೂ ಲಕ್ಷಾಂತರ ಭಕ್ತರನ್ನು ಹೊಂದಲಿದೆ ಎಂದರು.
ಈ ಸಮಯದಲ್ಲಿ ಶ್ರೀಮಠದ ಉಸ್ತುವಾರಿ ವೇ.ಮುರುಘೇಶ ವಿರಕ್ತಮಠ, ಜೆಡಿಎಸ್ ತಾಲೂಕಾ ಅಧ್ಯಕ್ಷ ಮಡುಸಾಹುಕಾರ ಬಿರಾದಾರ, ಬಂದು, ಆಪ್ತಸಹಾಯಕ ಲಕ್ಷ್ಮಣ ರ‍್ಯಾಗೇರಿ, ಮೊದಲಾದವರು ಉಪಸ್ಥಿತರಿದ್ದರು.

