Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
(ರಾಜ್ಯ ) ಜಿಲ್ಲೆ

ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಭಾಗದಲ್ಲಿ ಅರಳಿದ ಪ್ರತಿಭೆ, ಜಿಲ್ಲೆಗೆ 2ನೇ ಸ್ಥಾನ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಸಾಧನೆ ಯಾರ ಸ್ವತ್ತಲ್ಲ, ನಿಶ್ಚಿತ ಗುರಿಯೊಂದಿಗೆ ಸೂಕ್ತ ಮಾರ್ಗದರ್ಶನದಲ್ಲಿ ಸತತ ಪ್ರಯತ್ನ ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಗ್ರಾಮೀಣ ಭಾಗದ ಅಪ್ಪಟ ಹಳ್ಳಿಯ ಪ್ರತಿಭೆ ಮಹಮ್ಮದ್ ಯಾಸೀನ್ ಹೊನ್ನಳ್ಳಿ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿ ನಿಲ್ಲುತ್ತಾನೆ.
ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಪ್ರೌಢಶಾಲಾ ನಿವೃತ್ತ ಶಿಕ್ಷಕರಾದ ಮಶ್ಯಾಕಸಾಬ್ ಹೊನ್ನಳ್ಳಿ ಹಾಗೂ ತಾಯಿ ಇಮಾಂಬಿ ಹೊನ್ನಳ್ಳಿ ಅವರ ಸುಪುತ್ರನಾದ ಮಹಮ್ಮದ್ ಯಾಸೀನ್ ಹೊನ್ನಳ್ಳಿ ನೀಟ್ (ಯುಜಿ) 2026 ಪರೀಕ್ಷೆಯಲ್ಲಿ 720ಕ್ಕೆ 632 ಅಂಕಗಳನ್ನು ಗಳಿಸಿ ಅಖಿಲಭಾರತ ಮಟ್ಟದಲ್ಲಿ 3226ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಗ್ರಾಮೀಣ ಭಾಗದ ಎ.ಕೆ.ಸಿರಸಗಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಯು ಕಾಲೇಜಿನ ಅವಧಿಯ ನಂತರ ಮನೆಯಲ್ಲಿಯೇ ಆನ್‌ಲೈನ್ ತರಬೇತಿಯನ್ನೂ ಪಡೆದುಕೊಳ್ಳುವ ಮೂಲಕ ಸತತ ಪರಿಶ್ರಮದ ಅಧ್ಯಯನ ಮಾಡುವ ಮೂಲಕ ಪ್ರಥಮ ಹಂತದಲ್ಲಿಯೇ ನೀಟ್ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಗೆ 2ನೇ ರ‍್ಯಾಂಕ್ ಮತ್ತು ಜೆಇಇ ಮುಖ್ಯ ಪರೀಕ್ಷೆಯಲ್ಲಿಯೂ ಸಹ ಶೇ. 98.09 ಅಂಕ ಪಡೆದು ಸಾಧನೆ ಮಾಡಿರುವುದು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಯ ತಂದೆ-ತಾಯಿ ಅವರ ಕೀರ್ತಿಯನ್ನು ಹೆಚ್ಚಿಸಿದ್ದು, ಅವರು ಅತೀವ ಸಂತಸ ಮತ್ತು ಸಾರ್ಥಕ ಭಾವವನ್ನು ಮೆರೆದಿದ್ದಾರೆ.
ವಿದ್ಯಾರ್ಥಿಯ ತಂದೆ ಮಶ್ಯಾಕಸಾಬ್ ಹೊನ್ನಳ್ಳಿ ಅವರ ನುಡಿಗಳು: ನಮ್ಮ ಮಗ ಊಟ, ನಿದ್ರೆಯನ್ನು ಬಿಟ್ಟು ಸತತ ಅಧ್ಯಯನ ಮಾಡಿದ್ದರ ಪ್ರತಿಫಲ ಇದಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಹಂತದಿಂದಲೇ ವೈದ್ಯನಾಗಬೇಕೆಂಬ ಕನಸನ್ನು ಹೊತ್ತುಕೊಂಡ ನನ್ನ ಮಗ ಇಂದು ತನ್ನ ಆಸೆಯನ್ನಷ್ಟೇ ಅಲ್ಲ ನಮ್ಮ ಸಮಸ್ತ ಪರಿವಾರದವರ ಆಸೆಯನ್ನೂ ಈಡೇರಿಸಿದ್ದು, ನಮಗೆಲ್ಲ ಖುಷಿ ತಂದಿದ್ದು, ಇದೇ ವೇಳೆ ಅವನ ಅಧ್ಯಯನದಲ್ಲಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿ ಪ್ರೋತ್ಸಾಹಿಸಿದ ಕಾಲೇಜಿನ ಆಡಳಿತ ಮಂಡಳಿ ಮತ್ತು ಎಲ್ಲ ಉಪನ್ಯಾಸ ಬಳಗಕ್ಕೂ ನಾವು ಕೃತಜ್ಞತೆ ಸಲ್ಲಿಸುತ್ತೇವೆ. ದೆಹಲಿಯ ನೋಯ್ಡಾದಲ್ಲಿ ಸನ್ಮಾನ: ಪಿಯುಸಿ ಅಧ್ಯಯನ ಮಾಡುತ್ತಿರುವಾಗಲೇ ಆನ್‌ಲೈನ್ ಪಿಡಬ್ಲೂ (ಪಿಜಿಕ್ಸ್ ವಾಲಾ) ಕೋಚಿಂಗ್ ಪಡೆದು ಯಶಸ್ವಿಯಾದ ವಿದ್ಯಾರ್ಥಿಯ ಸಾಧನೆಯನ್ನು ಗುರುತಿಸಿ ಪಿಡಬ್ಲೂ ಸಂಸ್ಥೆಯವರು ದೆಹಲಿಯ ನೊಯಡಾದಲ್ಲಿ ವಿದ್ಯಾರ್ಥಿ ಮತ್ತು ಪಾಲಕರನ್ನು ಏರೋಪ್ಲೇನ್‌ನಲ್ಲಿ ಬಂದು ಹೋಗುವ ಎಲ್ಲ ಖರ್ಚು ವೆಚ್ಚಗಳನ್ನು ಭರಿಸಿ ಅಲ್ಲಿಗೆ ಕರೆಸಿ ಸನ್ಮಾನಿಸಿ ಗೌರವ ಸಲ್ಲಿಸಿದ್ದು, ವಿದ್ಯಾರ್ಥಿ ಮತ್ತು ಪಾಲಕರಲ್ಲಿ ಮತ್ತಷ್ಷು ಖುಷಿ ಹೆಚ್ಚಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.