Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!
(ರಾಜ್ಯ ) ಜಿಲ್ಲೆ

ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆˌ (ಜಮಖಂಡಿ): ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ತಡರಾತ್ರಿ ನಿಲ್ಲಿಸಿದ್ದ ಮಹೀಂದ್ರ ಎಕ್ಸ್ಯುವಿ (XUV300) ಕಾರು ಏಕಾಏಕಿ ಭಾರೀ ಸ್ಫೋಟಗೊಂಡು ಸಂಪೂರ್ಣ ಛಿದ್ರಛಿದ್ರವಾದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಕಾರಿನ ಭಾಗಗಳು ಸುತ್ತಮುತ್ತಲಿನ ಪ್ರದೇಶಕ್ಕೆ ಚದುರಿಬಿದ್ದಿದ್ದು, ಎಂಜಿನ್ ಸಹ ತುಂಡು-ತುಂಡಾಗಿರುವುದು ಕಂಡುಬಂದಿದೆ. ಅದೃಷ್ಟವಶಾತ್ ಕಾರಿನ ಮಾಲೀಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಫೋಟಗೊಂಡ ವಾಹನವು ಹಿಪ್ಪರಗಿ ಗ್ರಾಮದ ಜಯಶ್ರೀ ಹಣಮಂತ ಅಥಣಿ ಅವರ ಹೆಸರಿನಲ್ಲಿರುವ XUV300 ಕಾರು ಎಂದು ತಿಳಿದುಬಂದಿದೆ. ಸುಮಾರು ಮೂರು ವರ್ಷಗಳ ಹಿಂದೆ ವೈನ್ ಶಾಪ್ ನಡೆಸುತ್ತಿರುವ ಹನುಮಂತ ಅಥಣಿ ಅವರು ತಮ್ಮ ಪತ್ನಿಯ ಹೆಸರಿನಲ್ಲಿ ಈ ವಾಹನವನ್ನು ಖರೀದಿಸಿದ್ದರು.
ಘಟನೆ ಕುರಿತು ಮಾಹಿತಿ ನೀಡಿದ ಕಾರಿನ ಮಾಲೀಕ ಹನುಮಂತ ಅಥಣಿ, “ನಮ್ಮ ಊರು ರಬಕವಿ. ಶನಿವಾರ ಸುಮಾರು 4.30 ಗಂಟೆಗೆ ಹಿಪ್ಪರಗಿಯ ಬಾರ್ ಬಳಿ ಕಾರು ನಿಲ್ಲಿಸಿದ್ದೆ. ರಾತ್ರಿ ಸುಮಾರು 10.45ರ ವೇಳೆಗೆ ಬಾರ್‌ನ ಲೆಕ್ಕಪತ್ರ ಹಾಗೂ ಹಣದ ವ್ಯವಹಾರ ಮುಗಿಸಿಕೊಂಡು ಹೊರಬರುತ್ತಿದ್ದಾಗ ಏಕಾಏಕಿ ಭಾರೀ ಸ್ಫೋಟದ ಶಬ್ದ ಕೇಳಿಸಿತು. ಓಡಿ ಹೋಗಿ ನೋಡಿದಾಗ ಕಾರು ಸಂಪೂರ್ಣವಾಗಿ ಛಿದ್ರಛಿದ್ರವಾಗಿತ್ತು. ಸ್ಫೋಟದ ತೀವ್ರತೆಗೆ ಕಾರಿನ ಕೆಲವು ಭಾಗಗಳು ಬಹಳ ದೂರಕ್ಕೆ ಹಾರಿ ಬಿದ್ದಿದ್ದವು. ಎಂಜಿನ್ ಕೂಡ ಪೀಸ್-ಪೀಸ್ ಆಗಿದೆ. ಈ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪೊಲೀಸರು ಸಮಗ್ರ ತನಿಖೆ ನಡೆಸಿ ಪತ್ತೆಹಚ್ಚಬೇಕು” ಎಂದು ಆಗ್ರಹಿಸಿದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಬಾಗಲಕೋಟೆ ಹಾಗೂ ಬೆಳಗಾವಿಯಿಂದ ಬಾಂಬ್ ನಿಷ್ಕ್ರಿಯ ದಳ (Bomb Detection and Disposal Squad) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ತನಿಖೆಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಸದ್ಯ ಕಾರು ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷ, ಸ್ಫೋಟಕ ವಸ್ತು ಅಥವಾ ಇತರೆ ಯಾವುದೇ ಕಾರಣಗಳಿವೆಯೇ ಎಂಬ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಬಾಂಬ್ ನಿಷ್ಕ್ರಿಯ ದಳದ ಪರಿಶೀಲನೆ ಬಳಿಕವೇ ಸ್ಫೋಟದ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.
ಈ ಘಟನೆ ಹಿಪ್ಪರಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.