Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ರೈಸ್, ಬೇಡ ಬ್ರೋ ಅಭಿಯಾನ ಅತ್ಯಂತ ಶ್ಲಾಘನೀಯವಾಗಿದೆ. ಯುವಶಕ್ತಿಯು ಡ್ರಗ್ಸ್ ಅನ್ನು ತಿರಸ್ಕರಿಸಿ, ಮಾಹಿತಿ ನೀಡಿ ಸಂತ್ರಸ್ತರಿಗೆ ಬೆಂಬಲವಾಗಿ ಮತ್ತು ಸಮಾಜವನ್ನು ಸಬಲೀಕರಿಸುವ ಮೂಲಕ ಈ ಹೋರಾಟದಲ್ಲಿ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.
ನಗರದ ಎಚ್.ಜಿ.ಕಾಲೇಜಿನ ಸಭಾಭವನದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್, ಇಂಡಿ ಉಪವಿಭಾಗ ಹಾಗೂ ಸಿಂದಗಿ ಪೊಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರೈಸ್, ಬೇಡ ಬ್ರೋ ಡ್ರಗ್ಸ್ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಪೀಳಿಗೆಯು ಮಾದಕ ವ್ಯಸನವೆಂಬ ಸಾಮಾಜಿಕ ಪಿಡುಗಿಗೆ ಬಲಿಯಾಗದಂತೆ ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಉತ್ತಮ ಮೌಲ್ಯಗಳನ್ನು ಬೆಳೆಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಯುವಜನರು ಮಾದಕ ವ್ಯಸನದ ದುಷ್ಪರಿಣಾಮಗಳಿಂದ ದೂರವಿದ್ದು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದರು.
ಈ ವೇಳೆ ತಹಶೀಲ್ದಾರ ಕರೆಪ್ಪ ಬೆಳ್ಳಿ ಹಾಗೂ ಆರೋಗ್ಯ ಇಲಾಖೆಯ ಎಸ್.ಡಿ.ಕುಲಕರ್ಣಿ ಮಾತನಾಡಿ, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡಲು ಸರ್ಕಾರ ಈ ಕಾರ್ಯಕೈಗೊಂಡಿರುವುದು ಸಂತಸ ತಂದಿದೆ. ಇಂತಹ ಕಾರ್ಯಕ್ರಮಗಳಿಂದ ಅದೆಷ್ಟೋ ಯುವ ಜನಾಂಗ ಸುಂದರ ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ. ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ವೇದಿಕೆ ಮೇಲೆ ಆಲಮೇಲ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಅಶೋಕ ಕೊಳಾರಿ, ರವಿರಾಜ ದೇವರಮನಿ, ಎಲೈಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೈಬೂಬ ಅಸಂತಾಪೂರ, ರೋಹಿಣಿ ನ್ಯಾಮಗೊಡ ಇದ್ದರು. ಸಿಂದಗಿ ಸಿಪಿಆಯ್ ಸುನೀಲ ಮೂಲಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಪಿಎಸ್‌ಆಯ್ ಶ್ರೀಕಾಂತ ಕಾಂಬಳೆ ವಂದಿಸಿದರು. ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸತೀಶ ಪಾಟೀಲ, ಎಂ.ಎನ್.ಅಜ್ಜಪ್ಪ, ಶಾಂತೂ ಬಿರಾದಾರ, ಮುಕ್ತಾಯಕ್ಕ ಕತ್ತಿ, ಎಫ್.ಎ.ಹಾಲಪ್ಪನವರ, ಎ.ಆರ್.ಸಿಂದಗಿಕರ, ಎಸ್.ಎಸ್.ಚವ್ಹಾಣ, ಎ.ಬಿ.ಪಾಟೀಲ, ಗಂಗಾರಾಮ ಪವಾರ, ದೈಹಿಕ ಶಿಕ್ಷಣ ಉಪನ್ಯಾಸಕ ಸತೀಶ ಬಸರಕೋಡ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.