ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆಯನ್ನು ಜು.೨೯ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ ೯.೩೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಶಾಸಕರು, ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
