Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
(ರಾಜ್ಯ ) ಜಿಲ್ಲೆ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಭಿಮತ

ಉದಯರಶ್ಮಿ ದಿನಪತ್ರಿಕೆ
​ಚಿಕ್ಕಬಳ್ಳಾಪುರ(ಮುದ್ದೇನಹಳ್ಳಿ)/ಬೆಂಗಳೂರು: ಕೃತಕ ಬುದ್ಧಿಮತ್ತೆ (ಂಡಿಣiಜಿiಛಿiಚಿಟ Iಟಿಣeಟಟigeಟಿಛಿe-ಂI) ರೂಪದ ಆಧುನಿಕ ತಂತ್ರಜ್ಞಾನವು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಪ್ರತಿಯೊಬ್ಬ ಪ್ರತಿಭಾವಂತ ಯುವಕ-ಯುವತಿಯರಿಗೂ ತಲುಪಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಐ.ಎ.ಎಸ್. ತಿಳಿಸಿದರು.
​ಅವರು ಇಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ‘ಸತ್ಯಸಾಯಿ ಗ್ರಾಮ’ದಲ್ಲಿ ಏರ್ಪಡಿಸಲಾಗಿದ್ದ ‘ರೂರಲ್ ಶೋರ್ಸ್ ಎಐ ಕೌಶಲ್ಯ ಮತ್ತು ಅನುಭವ ಕೇಂದ್ರ’ (ಖuಡಿಚಿಟShoಡಿes ಂI Sಞiಟಟiಟಿg ಚಿಟಿಜ ಇxಠಿeಡಿieಟಿಛಿe ಅeಟಿಣಡಿe) ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, “ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವ ಈ ಕಾಲಘಟ್ಟದಲ್ಲಿ ಎಐ ನಂತಹ ಆಧುನಿಕ ತಂತ್ರಜ್ಞಾನಕ್ಕೆ ಕರುಣೆ, ನೈತಿಕತೆ ಮತ್ತು ಸದ್ಗುಣಗಳ ಸ್ಪರ್ಶವಿರಬೇಕು. ತಂತ್ರಜ್ಞಾನವು ಮಾನವನ ಬುದ್ಧಿವಂತಿಕೆ ಮತ್ತು ಸದ್ಗುಣಗಳನ್ನು ಹೆಚ್ಚಿಸುವಂತಿರಬೇಕು. ಸತ್ಯಸಾಯಿ ಗ್ರಾಮದಂತಹ ಪವಿತ್ರ ಹಾಗೂ ಸೇವಾ ಮನೋಭಾವದ ವಾತಾವರಣದಲ್ಲಿ ಈ ಕೇಂದ್ರ ಪ್ರಾರಂಭವಾಗಿರುವುದು ಅತ್ಯಂತ ಸೂಕ್ತವಾಗಿದೆ,” ಎಂದು ಅಭಿಪ್ರಾಯಪಟ್ಟರು.
ಗ್ರಾಮೀಣ ಯುವಕರ ಸಬಲೀಕರಣ: “ರೂರಲ್ ಶೋರ್ಸ್ ಸಂಸ್ಥೆಯು ಕಳೆದ ೧೮ ವರ್ಷಗಳಿಂದ ಗ್ರಾಮೀಣ ಭಾಗದ ಯುವಜನರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ಅವರು ಇದ್ದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ.
ಈವರೆಗೆ ಸುಮಾರು ೩೦,೦೦೦ ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ತರಬೇತಿ ಹಾಗೂ ಉದ್ಯೋಗಾವಕಾಶ ನೀಡಿರುವುದು ಮತ್ತು ಅಮೆರಿಕದಲ್ಲೂ ‘ಪೀಪಲ್‌ಶೋರ್ಸ್’ ಮೂಲಕ ಸುಮಾರು ೫೦೦ ಯುವತಿಯರು/ಮಹಿಳೆಯರಿಗೆ ಉದ್ಯೋಗ ನೀಡುತ್ತಿರುವುದು ಹೆಮ್ಮೆಯ ವಿಷಯ,” ಎಂದರು.
ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಸೇವೆಗೆ ಶ್ಲಾಘನೆ: “ಉಚಿತ ಶಿಕ್ಷಣ, ಉಚಿತ ಆರೋಗ್ಯ ಮತ್ತು ಪೌಷ್ಟಿಕ ಆಹಾರ ಒದಗಿಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂಬ ತತ್ವದಡಿ ಕಾರ್ಯನಿರ್ವಹಿಸುತ್ತಿರುವ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಮಾರ್ಗದರ್ಶನದ ಸೇವಾ ಕಾರ್ಯಗಳು ಅದ್ಭುತವಾಗಿವೆ. ಭಾರತದ ಪ್ರಥಮ ಸಂಪೂರ್ಣ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜು (ಶ್ರೀ ಮಧುಸೂದನ ಸಾಯಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್) ಸೇರಿದಂತೆ ಅನೇಕ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿರುವುದು ಮಾದರಿಯಾಗಿದೆ,” ಎಂದು ತಿಳಿಸಿದರು.
ತಂತ್ರಜ್ಞಾನ ರಾಜಧಾನಿಯಾಗಿ ಕರ್ನಾಟಕದ ಕೊಡುಗೆ: “ಕರ್ನಾಟಕವು ದೇಶದ ತಂತ್ರಜ್ಞಾನ ರಾಜಧಾನಿಯಾಗಿ ಬೆಳೆಯುತ್ತಿದ್ದು, ಇಂತಹ ಎಐ ಕೌಶಲ್ಯ ಕೇಂದ್ರಗಳು ಗ್ರಾಮೀಣ ಯುವಕರನ್ನು ಭವಿಷ್ಯದ ತಂತ್ರಜ್ಞಾನಕ್ಕೆ ಸಜ್ಜುಗೊಳಿಸಲಿವೆ. ಭಾರತವು ಜಾಗತಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ನಾಯಕತ್ವ ವಹಿಸಲು ಗ್ರಾಮೀಣ ಭಾಗದ ಪ್ರತಿಭೆಗಳ ಕೊಡುಗೆ ಅಪಾರವಾಗಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
​ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಜಿ, ರೂರಲ್ ಶೋರ್ಸ್ ಸಂಸ್ಥೆಯ ನಿರ್ದೇಶಕರು, ಗಣ್ಯರು, ದೇಶ-ವಿದೇಶಗಳ ಭಕ್ತಾದಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.