ಸಿಂದಗಿ: ನಿಯಮಿತವಾಗಿ ಆಹಾರ ಸೇವನೆ ಮಾಡುವುದರಿಂದ ಆರೋಗ್ಯಕರವಾದ ಜೀವನ ಸಾಗಿಸಬಹುದು ಎಂದು ಸಿವಿಲ್ ಹಿರಿಯ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಆವರಣದಲ್ಲಿ ಗುರುವಾರದಂದು ಸಾರ್ವಜನಿಕ ಆಸ್ಪತ್ರೆ ತಾಲೂಕು, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕವಾಗಿ ಸದೃಢವಾಗಿ ಆರೋಗ್ಯಯುತವಾಗಿದ್ದರೂ ಮನಸ್ಸು ದುರ್ಬಲವಾಗಿದ್ದರೆ ನೂರಾರು ಕಾಯಿಲೆಗಳು ಬರುವ ಸಾಧ್ಯತೆಯಿದೆ. ಅವರು ಮಾನಸಿಕ ಆರೋಗ್ಯವೆಂದರೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಪೂರ್ಣವಾಗಿ ಸ್ವಸ್ಥವಾಗಿರುವುದು. ಹಿರಿಯ ನಾಗರಿಕರನ್ನು ಗೌರವಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳು ತಂದೆ ತಾಯಿಯನ್ನು ಗೌರವಾದರಗಳಿಂದ ಕಾಣಬೇಕು. ಹಿರಿಯ ನಾಗರಿಕರಿಗೆ ಅನ್ಯಾಯವಾದಾಗ, ಅವರಿಗಾಗಿ ಕಾನೂನುಗಳಿವೆ. ಅವುಗಳ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.
ಈ ವೇಳೆ ಜಿಲ್ಲಾ ಮನೋತಜ್ಞ ವೈದ್ಯ ಡಾ. ಮಂಜುನಾಥ್ ಮಸಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ, ಸರಕಾರಿ ವಕೀಲರಾದ ಆನಂದ ರಾಠೋಡ, ಆನಂದ ದೇಸಾಯಿ, ಎಮ್.ಎಸ್. ಪಾಟೀಲ ಮಾತನಾಡಿದರು.
ಈ ವೇಳೆ ಡಾ.ಎಂ.ಆರ್ ಬಡಿಗೇರ, ಡಾ.ವಿಜಯಮಹಾಂತೇಶ, ಡಾ.ಪೂಜಾ, ಮಡಿವಾಳಮ್ಮ ಹಿರೇಮಠ, ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವರ್ಗ ಇದ್ದರು.
ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ ಸ್ವಾಗತಿಸಿದರು. ರಾಜಶೇಖರ ನರಗೋದಿ ನಿರೂಪಿಸಿ, ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

