Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಶಿಕ್ಷಣದ ಮುಖ್ಯ ಉದ್ದೇಶ
(ರಾಜ್ಯ ) ಜಿಲ್ಲೆ

ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಶಿಕ್ಷಣದ ಮುಖ್ಯ ಉದ್ದೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶಿಲಾಧರ ಎನ್. ಜಾಧವ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಲ್ಲ. ಉತ್ತಮ ವ್ಯಕ್ತಿತ್ವ, ಮಾನವೀಯತೆ, ಶಿಸ್ತು ಹಾಗೂ ಸಮಾಜದ ಬಗ್ಗೆ ಕಾಳಜಿ ಬೆಳೆಸಿಕೊಳ್ಳುವುದೂ ಶಿಕ್ಷಣದ ಮುಖ್ಯ ಉದ್ದೇಶವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಶಿಲಾಧರ ಎನ್. ಜಾಧವ ಹೇಳಿದರು.
ಸಿಂದಗಿ ನಗರದ ಆರ್.ಡಿ. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಠ್ಯಪೂರಕ ಚಟುವಟಿಕೆಗಳು, ರೋವರ್ ಮತ್ತು ರೇಂಜರ್, ಭಾರತ ಸೇವಾದಳ ಹಾಗೂ ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಮಹಾವಿದ್ಯಾಲಯವು ಪ್ರತಿವರ್ಷ ಉತ್ತಮ ಫಲಿತಾಂಶ ನೀಡುತ್ತಿದ್ದು, ಶಿಸ್ತು, ಸಂಸ್ಕಾರ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ವಿದ್ಯಾರ್ಥಿಗಳು ರಾಜ್ಯ ಹಾಗೂ ದೇಶದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು.
ಈ ವೇಳೆ ವಿಜಯಪುರದ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ನರರೋಗ ತಜ್ಞ ಡಾ.ವಿರುಪಾಕ್ಷಪ್ಪ ಬಿರಾದಾರ ಮಾತನಾಡಿದರು.
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪಿ.ವಿ.ಮಹಲಿನಮಠ, ಎಸ್.ಎಸ್.ಜಾಧವ, ಡಾ.ಶರಣಬಸವ ಜೋಗೂರ, ಬಿ.ಬಿ. ಜಮಾದಾರ, ಶಿವಶರಣ ಬೂದಿಹಾಳ, ಡಾ.ವಿ.ಪಿ. ನಂದಿಕೋಲ, ಎನ್.ಬಿ. ಪೂಜಾರಿ, ವಿ.ಕೆ.ಹಿರೇಮಠ, ಎಂ.ಐ. ಮುಜಾವರ, ಸಂಗಮೇಶ ಮಾರ್ಸನಳ್ಳಿ, ಶಿವರಾಜ ಕುಂದಗೋಳ, ಪ್ರಸನ್ನ ಜೋಗೂರ ಸೇರಿದಂತೆ ಭೋದಕ ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಚರ್ಚಾಕೂಟ ವಿಭಾಗದ ಕಾರ್ಯಾಧ್ಯಕ್ಷ ಜೆ.ಎಂ.ಗಾಣಗೇರ ಸ್ವಾಗತಿಸಿ ಪರಿಚಯಿಸಿದರು. ರಾಹುಲ ನಾರಾಯಣಕರ, ಸ್ನೇಹಾ ಪಾಟೀಲ ಹಾಗೂ ನಿಖಿತಾ ಹಿರೇಮಠ ನಿರೂಪಿಸಿದರು. ನಾಜ್ಮಾ ಮೇಲಿನಮನಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.