ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರಂದು ಆಯೋಜಿಸಲಾಗುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿಸಲು ಎಲ್ಲ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ ೧೫ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅಭಿಷೇಕ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

