ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಇದೇ ಅಕ್ಟೋಬರ್ ೨೮ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ರಂಗಮಂದಿರದಲ್ಲಿ ಜರುಗುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ ಬಸನಗೌಡ ಪಾಟೀಲ, ಅಶೋಕ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವೆಗಳ ಉಪನಿರ್ದೇಶಕ ಡಾ.ಅಶೋಕ ಎಸ್.ಘೋಣಸಗಿ ಭಾಗವಹಿಸಲಿದ್ದಾರೆ.
ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ : ಜಿಲ್ಲಾಡಳಿತದ ವತಿಯಿಂದ ಅ.೨೮ರಂದು ಹಮ್ಮಿಕೊಂಡ ಶ್ರೀ ಮಹರ್ಷಿ ಭಾವಚಿತ್ರ ಮೆರವಣಿಗೆ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಲು ಹಾಗೂ ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಎಲ್ಲ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
Related Posts
Add A Comment