Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ
(ರಾಜ್ಯ ) ಜಿಲ್ಲೆ

ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ ಸಂಘರ್ಷಕ್ಕೆ ತೆರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೂಕದಲ್ಲಿ ಮೋಸ, ಆಕ್ಷನ್ ನೆಪದಲ್ಲಿ ತೂರಾಟ ನಡೆಸಿ ಅನಾವಶ್ಯಕವಾಗಿ ರೈತರ ಉತ್ಪನ್ನ ಹಾಳಾಗುವುದನ್ನು ತಪ್ಪಿಸಲು ಹಾಗೂ ಪಾರದರ್ಶಕ ವಹಿವಾಟಿಗಾಗಿ ಆನ್ ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಮೊದಲ ಆದ್ಯತೆ ನೀಡಬೇಕು. ಹೀಗಾಗಿ ಕಡ್ಡಾಯವಾಗಿ ವಾರದಲ್ಲಿ ಎರಡು ಭಾರಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆಯಲ್ಲೇ ಒಣ ದ್ರಾಕ್ಷಿ ವಹಿವಾಟು ನಡೆಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಜಯಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಮಂಗಳವಾರ ಎಪಿಎಂಸಿ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ನಡೆಸಿದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ದ್ರಾಕ್ಷಿ ಬೆಳೆಗಾರರ ಅನುಕೂಲಕ್ಕಾಗಿ ನಗರದಲ್ಲಿ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕೆ ಹೆಚ್ಚಿನ ಆದ್ಯತೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ತಾತ್ಕಾಲಿಕವಾಗಿ ವಾರದಲ್ಲಿ ಒಮ್ಮೆ ಮಾತ್ರ ಆಫ್ ಲೈನ್ ಮೂಲಕ ವಹಿವಾಟು ನಡೆಯಲಿ. ಆದರೆ, ಕಡ್ಡಾಯವಾಗಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪಾಲಿಸುವ ಮಾರ್ಗಸೂಚಿಗಳು ಮತ್ತು ನಿಯಮಗಳನ್ನೇ ಪಾಲಿಸಬೇಕು. ಇದರ ಸಾಧಕ-ಬಾಧಕ ನೋಡಿ ಮುಂದುವರೆಸಬೇಕೋ ಬೇಡ ಎನ್ನುದರ ಬಗ್ಗೆ ತಿರ್ಮಾನ ಮಾಡೋಣ ಎಂದು ಸಭೆಗೆ ತಿಳಿಸಿದರು.
ಆನ್ ಲೈಕ್ ಮಾರುಕಟ್ಟೆಯಿಂದ ರೈತರಿಗೆ ಯಾವುದೇ ರೀತಿಯ ಮೋಸ ಆಗುವುದಿಲ್ಲ. ಆಪಲೈನ್ ವ್ಯವಸ್ಥೆ ವರ್ತಕರಿಗೆ ಈವರೆಗೆ ರೈತರು ನೀಡುತ್ತಿದ್ದ ಶೇ 2 ರಷ್ಟು ಕಮಿಷನ್ ಸಹ ಉಳಿಯಲಿದೆ. ಹೀಗಾಗಿ ರೈತ ವಿರೋಧಿ ಮತ್ತು ವರ್ತಕರ ವಿರೋಧಿಯಾದ ಖಾಸಗಿ ಅಸೋಸಿಯೇಷನ್ ನಿಯಮಗಳನ್ನು ತಕ್ಷಣ ರದ್ದುಪಡಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರಕ್ಕೂ ಆದಾಯ: ಎಪಿಎಂಸಿ ನಿಯಮಾವಳಿ ಮತ್ತು ಅಧಿಕಾರಿಗಳ ಸಮ್ಮುಖದಲ್ಲೇ ವ್ಯಾಪಾರ ನಡೆಯುವುದರಿಂದ ವಹಿವಾಟಿನ ನಿಖರ ಮಾಹಿತಿ ಸಿಗುತ್ತದೆ. ಆಗ ಸರ್ಕಾರಕ್ಕೆ ದೊರೆಯಬೇಕಾದ ಸೆಸ್ ಮತ್ತು ಜಿ.ಎಸ್.ಟಿ ಮೂಲಕ ಹೆಚ್ಚಿನ ಆದಾಯ ದೊರೆಯಲಿದೆ. ಎಪಿಎಂಸಿ ಯಲ್ಲಿ ಪರವಾನಗಿ ಪಡೆಯುವ ಪ್ರತಿಯೊಬ್ಬ ವರ್ತಕರು ಆನ್ ಲೈನ್ ಮತ್ತು ಆಪಲೈನ್ ದಲ್ಲಿ ಖರೀದಿ ಮಾಡಲು ಅವಕಾಶ ಕಲ್ಪಿಸಬೇಕು. ಪರವಾನಗಿ ಕೋರಿ ಅರ್ಜಿ ಸಲ್ಲಿಸುವ ವರ್ತಕರಿಗೆ ವಿನಾಕಾರಣ ಸತಾಯಿಸದೇ ನಿಯಮಾವಳಿ ಪ್ರಕಾರ ಪರವಾನಗಿ ನೀಡಬೇಕು. ವರ್ತಕರ ಸಂಖ್ಯೆ ಹೆಚ್ಚಾದರೆ, ಆಗ ನಮ್ಮಲ್ಲಿಯೇ ವ್ಯಾಪಾರ ಕೂಡ ಅಧಿಕ ಆಗುವುದರಿಂದ, ರೈತರಿಗೆ ಬೆಲೆಯೂ ಹೆಚ್ಚಿಗೆ ಸಿಗುತ್ತದೆ. ಇದರೊಂದಿಗೆ ನಮ್ಮ ರಾಜ್ಯದಿಂದ ಬೇರೆ ರಾಜ್ಯಕ್ಕೆ ಹೋಗುವ ಲಾಭ ತಪ್ಪಿಸಲು ಸಹ ನೆರವಾಗಲಿದೆ ಎಂದು ಹೇಳಿದರು.
ದೇಶದ ಯಾವುದೇ ರಾಜ್ಯದ ವರ್ತಕರು ಆನಲೈನ್ ಮತ್ತು ಆಪ್ ಲೈನ್ ಮಾರುಕಟ್ಟೆ ವಹಿವಾಟಿನಲ್ಲಿ ಭಾಗವಹಿಸಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಜಯಪುರ ದ್ರಾಕ್ಷಿ ಬೆಳೆಗೆ ಉತ್ತೇಜನ ನೀಡಲು ಹಾಗೂ ರೈತರಿಗೆ ಹೆಚ್ಚಿನ ಲಾಭ ದೊರಕಿಸಿ ಕೊಡಲು 140 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣ ಆಗುತ್ತಿರುವ ವೈನ್ ಪಾರ್ಕ್ ಗೆ, ಈ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆಯ ವಹಿವಾಟು ತಳಪಾಯ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.
ದ್ರಾಕ್ಷಿ ಮತ್ತು ವೈನ್ ಬೋರ್ಡ್ ಮಾಜಿ ಅಧ್ಯಕ್ಷರಾದ ಎಂ.ಎಸ್.ರುದ್ರಗೌಡ, ದ್ರಾಕ್ಷಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಭಯಕುಮಾರ ನಾಂದ್ರೇಕರ, ಜಿಲ್ಲಾಧ್ಯಕ್ಷ ಎಂ.ಎಸ್.ಲೋಣಿ, ಎಪಿಎಂಸಿ ಆಡಳಿತಾಧಿಕಾರಿ ಆರ್.ಆದಪ್ಪ, ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಸೇರಿದಂತೆ ದ್ರಾಕ್ಷಿ ಬೆಳೆಗಾರರು, ವರ್ತಕರು ಉಪಸ್ಥಿತರಿದ್ದರು.

ಸಭೆಯ ತಿರ್ಮಾನಗಳು

ವಾರದಲ್ಲಿ ಎರಡು ಬಾರಿ ಆನಲೈನ್ ಮೂಲಕ ಮತ್ತು ತಾತ್ಕಾಲಿಕವಾಗಿ ಒಂದು ಬಾರಿ ಆಫ್ ಲೈನ್ ಮೂಲಕ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ನಿರ್ಮಾಣ ಮಾಡಲಾದ ಆನ್ ಲೈನ್ ಟ್ರೇಡಿಂಗ್ ಮಾರುಕಟ್ಟೆ ಪ್ರಾಂಗಣದಲ್ಲೇ ಕಡ್ಡಾಯವಾಗಿ ವಹಿವಾಟು ನಡೆಸಲು ಹಾಗೂ ಕಾನೂನು ಬಾಹಿರವಾದ ಖಾಸಗಿ ಅಸೋಸಿಯೇಷನ್ ನಿಯಮಗಳನ್ನು ರದ್ದುಪಡಿಸಲು ಶಾಸಕರ ನೇತೃತ್ವದಲ್ಲಿ ಹಾಗೂ ಎಪಿಎಂಸಿ ಆಡಳಿತಾಧಿಕಾರಿ ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ತಿರ್ಮಾನಿಸಿ, ಠರಾವು ಪಾಸ್ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.