Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು
(ರಾಜ್ಯ ) ಜಿಲ್ಲೆ

ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುರು ವಿರಕ್ತ ಮಠಗಳಲ್ಲಿ ಸ್ಥಾಪಿಸಿರುವ ಮೂರ್ತಿಗಳು | ನಂದಿ ಕೂಗು ಅಭಿಯಾನದ ರುವಾರಿ ಬಸವರಾಜ ಬಿರಾದಾರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಯಡ್ರಾಮಿ: ಗುರು ವಿರಕ್ತ ಮಠಗಳು ನಂದಿ ಕೃಷಿಕರಿಂದ ಬೆಳೆಯುತ್ತಾ ಬಂದ ನಾಗರಿಕ ಸಮಾಜದಿಂದ ಜನ್ಮ ತಾಳಿವೆ ಎಂಬುದು ಇತಿಹಾಸದಿಂದ ಸ್ಪಷ್ಟವಾಗಿ ತಿಳಿಯುತ್ತದೆ. ನಂದಿ ಕೃಷಿಕರ ಭಾವೈಕ್ಯತೆಯ ಸಂಕೇತವಾಗಿ ಗುರು ವಿರಕ್ತ ಮಠಗಳಲ್ಲಿ ಸ್ಥಾಪಿಸಿರುವ ನಂದಿ ಮೂರ್ತಿಗಳು ನಾಗರಿಕತೆ ವಿಕಾಸವಾದ ಇತಿಹಾಸವನ್ನು ತಿಳಿಸುತ್ತದೆ ಎಂದು ನಂದಿ ಕೂಗು ಅಭಿಯಾನದ ರುವಾರಿ ಬಸವರಾಜ ಎನ್ ಬಿರಾದಾರ ತಿಳಿಸಿದರು.
ಯಡ್ರಾಮಿಯ ಶ್ರೀ ಮುರುಘೆಂದ್ರ ಶಿವಯೋಗಿ ವಿರಕ್ತಮಠದಲ್ಲಿ ಲಿಂಗೈಕ್ಯ ಶ್ರೀ ಸಿದ್ಧರಾಮ ಮಹಾಸ್ವಾಮಿಗಳ 5ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ಉದ್ಧೇಶಿಸಿ ಅವರು ಮಾತನಾಡಿದರು. 
ನಂದಿ ಸಂಪತ್ತು ನಾಶವಾದಂತೆ ವಿಶ್ವ ಮಟ್ಟದಲ್ಲಿ ಮಣ್ಣು ಹಾಗೂ ಮಾನವರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಂಡು ವಿಶ್ವಕ್ಕೆ ಮಾರ್ಗದರ್ಶನ ನೀಡುವ ಶಕ್ತಿ ಬಸವ ನಾಡಿನ ಪೂಜ್ಯರಿಗಿದೆ. ಶ್ರೀ ಸಿದ್ಧೇಶ್ವರ ಶ್ರೀಗಳ ಪ್ರೇರಣೆಯಿಂದ ಬಿಜ್ಜರಗಿ ಗ್ರಾಮದಿಂದ ಪ್ನಂರಾರಂಭವಾದ ನಂದಿ ಕೂಗು ಅಭಿಯಾನ‌ ಕಳೆದ 3 ವರ್ಷಗಳಲ್ಲಿ ಸಾಗಿ ಬಂದ ಹಾದಿಯಿಂದ ತಿಳಿಯುತ್ತದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮಣ್ಣಿನ ಸಾವಯವ ಇಂಗಾಲ ಸರಾಸರಿ 0.75% ರಷ್ಟು ಇತ್ತು, ಆದರೆ ಇಂದು 0.33% ಕ್ಕೆ ಇಳಿಕೆಯಾಗಿದೆ. ಇದಕ್ಕೆ ಮೂಲ ಕಾರಣ ಯಂತ್ರಗಳಿಗೆ ಆದ್ಯತೆ ನೀಡಿರುವುದು. ಬಸವ ನಾಡಿನ ಅನೇಕ ಪೂಜ್ಯರು ತನು ಮನ ಧನದಿಂದ ನಂದಿ ಕೂಗು ಅಭಿಯಾನಕ್ಕೆ ಬೆಂಬಲವಾಗಿ ನಿಂತು ಆಶಿರ್ವಾದ ಮಾಡುತ್ತಾ ಬಂದಿರುವ ಕಾರಣ ರಾಜ್ಯದ ಕೋಟ್ಯಾಂತರ ಜನರಿಗೆ ನಂದಿ ಕೃಷಿಕರ ಮಹತ್ವದ ಕುರಿತು ಅರಿವು ಮೂಡಿಸಲು ಸಾಧ್ಯವಾಗಿದೆ. ಬಸವ ನಾಡಿನ ಪೂಜ್ಯರು ಒಂದುಗೂಡಿ ರಾಜ್ಯದ 10 ಪ್ರತಿಶತ ಬಜೆಟ್ ನ್ನು ನಂದಿ ಕೃಷಿ ಸಂಸ್ಕೃತಿ ಪುನಶ್ಚೇತನಕ್ಕಾಗಿ ಮೀಸಲಿಡುವ ಕಾನೂನನ್ನು ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಹೆಸರಿನಲ್ಲಿ ಜಾರಿಗೆ ತಂದು ಇತರ ರಾಜ್ಯಗಳ ಪೂಜ್ಯರು ಹಾಗೂ ವಿಶ್ವದ ಎಲ್ಲ ಧಾರ್ಮಿಕ ಗುರುಗಳಿಗೆ ಮಾದರಿಯಾಗಿ ನಿಲ್ಲುವ ಅನಿವಾರ್ಯತೆ ಬಂದೊದಗಿದೆ. ಜೋಡೆತ್ತಿನ ಕೃಷಿಕರಿಗೆ ಪ್ರತಿ ತಿಂಗಳು ರೂ. 11000 ಪ್ರೋತ್ಸಾಹ ನೀಡುವ ಯೋಜನೆಯನ್ನು ಜಾರಿಗೆ ತರಲು ಪೂಜ್ಯರೆಲ್ಲರು ಒಗ್ಗೂಡಿ ಹಕ್ಕೊತ್ತಾಯ ಮಂಡಿಸಬೇಕಾಗಿದೆ ಎಂದರು.
ಬಳಿಕ ಮಾಜಿ ಶಾಸಕ, ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಮಾತನಾಡಿ, ಶ್ರೀ ಮಠದ ಹಿರಿಯ ಪೂಜ್ಯರಾದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳ ಪುಣ್ಯಾರಾಧನೆ ನಿಮಿತ್ತ ದಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಮಾದರಿಯಾಗಿದೆ. ಇದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾದ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ನೆಲೋಗಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಸುರಪುರ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಬಲಶೆಟ್ಟಿಹಾಳ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಅಂಕಲಗಿ ಮಠದ ಶ್ರೀ ಗುರುಬಸವ ಮಹಾಸ್ವಾಮಿಗಳು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಸವರಾಜ ಎನ್ ಬಿರಾದಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.