ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿಗೆ ಕರ್ನಾಟಕದ ಮೂಲ ನಿವಾಸಿಯಾಗಿರುವ ಮಿಲಿಟರಿ ಪಿಂಚಣಿದಾರರು ಹಾಗೂ ಮಾಜಿ ಸೈನಿಕರ (ಅಧಿಕಾರಿಗಳನ್ನು ಹೊರತುಪಡಿಸಿ) ಮಕ್ಕಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ೧ನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೊಮಾ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಅರ್ಜಿ ನಮೂನೆಗಳನ್ನು ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಕ್ಟೊಬರ್ ೩೧ ಕೊನೆಯ ದಿನವಾಗಿದೆ. ವೃತ್ತಿಪರ ಪದವಿ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ನವೆಂಬರ್ ೩೦.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
