ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸ್ಟೇಟ್ ಬೋರ್ಡ್, ಸಿ.ಬಿ.ಎಸ್.ಇ, ಐ.ಸಿ.ಎಸ್.ಇ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಗಳಿಸಿದ ಕರ್ನಾಟಕ ಮೂಲದ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್. ತಿಮ್ಮಯ್ಯನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿ ನಮೂನೆ ಪಡೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್೩೧ ರೊಳಗಾಗಿ ಮೂರು ಪ್ರತಿಗಳಲ್ಲಿ ಸಲ್ಲಿಸುವುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ: ೦೮೩೫೨-೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
