ವಿಜಯಪುರ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಶುದ್ಧ ನೀರೆತ್ತುವ ಪಂಪಿನ ಮನೆಯಲ್ಲಿ ಹಾಲಿ ಇರುವ ೧೨೦೦ ಅಶ್ವಶಕ್ತಿಯ ಪಂಪಗಳ ತುರ್ತು ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಅಕ್ಟೋಬರ್ ೨೭ ರಂದು ವಿಜಯಪುರ ನಗರಕ್ಕೆ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.