Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
(ರಾಜ್ಯ ) ಜಿಲ್ಲೆ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರವಾಹ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿಯ www.merakify.ai ಎಂಬ ಆನ್‌ಲೈನ್ ಬುದ್ದಿಮತ್ತೆ(AI) ವೇದಿಕೆಯನ್ನು ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರ ಪುತ್ರಿ ಸಾನ್ವಿ ಪಾಟೀಲ ತಮ್ಮ ಯುವ ಸ್ನೇಹಿತರೊಂದಿಗೆ ಸೇರಿ ಪ್ರಾರಂಭಿಸಿರುವ ಪ್ರವಾಹ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ಕಂಪನಿಯ www.merakify.ai ಎಂಬ ಆನ್‌ಲೈನ್ ಬುದ್ದಿಮತ್ತೆ(AI) ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂಥ ಕೃತಕ ಬುದ್ದಿಮತ್ತೆ ವೇದಿಕೆಗಳು ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುತ್ತವೆ. ಈ ನವೋದ್ಯಮ ತಂತ್ರಜ್ಞಾನ ಆಧಾರಿತವಾಗಿದ್ದು, ಕಥೆಗಾರರು, ಸಿನಿಮಾ ನಿರ್ಮಾಪಕರು, ಲೇಖಕರು, ಸೃಜನಶೀಲರು ಹಾಗೂ ಉದ್ಯಮಿಗಳಿಗೆ ಅತ್ಯಂತ ಉಪಯುಕ್ತ ವೇದಿಕೆಯಾಗಿದೆ. ನಮ್ಮ ಮನದಲ್ಲಿರುವ ಹೊಸ ಆಲೋಚನೆಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ಗುಣಮಟ್ಟದ ವಿಡಿಯೋಗಳಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಈ ವೇದಿಕೆ ಹೊಂದಿದೆ. ಶಿಕ್ಷಣ, ಜಾಹೀರಾತು, ಉದ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಅಗತ್ಯವಾದ ವಿವಿಧ ರೀತಿಯ ವಿಡಿಯೋ ಕಂಟೆಂಟ್‌ಗಳನ್ನು ಸುಲಭವಾಗಿ ಸೃಷ್ಟಿಸಲು ಇದು ನೆರವಾಗಲಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿ, ಯುವಕರ ಈ ಹೊಸ ಪ್ರಯತ್ನ ವಿನುತನವಾಗಿದ್ದು, ಅವರು ತಮ್ಮ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಇದೆ ವೇಳೆ www.merakify.ai ರೂಪಿಸಿರುವ ಬಂಥನಾಳ ಸಂಗನಬಸವ ಶಿವಯೋಗಿಗಳು, ಶಿಕ್ಷಣ ಪ್ರೇಮಿ ದಿ. ಬಿ. ಎಂ. ಪಾಟೀಲರ ಹಾಗೂ ಬಿ.ಎಲ್.ಡಿ.ಇ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಜೀವನ ಕುರಿತು ಎಐ ನಲ್ಲಿ ರಚಿಸಿದ ಕಿರುಚಿತ್ರ ಪ್ರದರ್ಶನಕ್ಕೆ ಸಚಿವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಕ್ಕಿನ ಕಲ್ಮಠ-ಶಿವಮೊಗ್ಗ ಜಗದ್ಗುರು ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸಾಗರದ ಸಂಸ್ಥಾನ ಮಠ, ಜಡೆ ಡಾ. ಮಹಾಂತ ಸ್ವಾಮಿಗಳು, ವಿಜಯಪುರ ಶಾಂತಾಶ್ರಮ, ಹುಬ್ಬಳ್ಳಿಯ ಶ್ರೀ ಅಭಿನವ ಸಿದ್ಧಾರೂಢ ಸ್ವಾಮಿಗಳು, ಹುಬ್ಬಳ್ಳಿ- ನಿಡೋಣಿ ಎರಡೆತ್ತಿನಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಮಣಕವಾಡ ದೇವ ಮಂದಿರ ಮಠದ ಶ್ರೀ ಅಭಿನವ ಮೃತ್ಯುಂಜಯ ಸ್ವಾಮಿಗಳು, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ವಿಡಿಎ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಹಮೀದ್ ಮುಶ್ರಿಫ್, ಪ್ರವಾಹ ಲ್ಯಾಬ್ಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕಿ ಸಾನ್ವಿ ಪಾಟೀಲ, ಪ್ರದೀಪ ಮಳಜಿ, ವಿಜಯ ಜತ್ತಿ, ಸಮರ್ಥ ದತ್ತರಗಾವಿ, ದತ್ತಾ ಕಂಬಾಗಿ, ಹರೀಶ ಅವರನ್ನೊಳಗೊಂಡ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.