Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ
(ರಾಜ್ಯ ) ಜಿಲ್ಲೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ನಿಗಮ ಮಂಡಳಿಗಳ ನೇಮಕಾತಿಗೆ ಅ.೨೮ ಹಾಗೂ ಅ.೨೯ರಂದು ಸ್ಪರ್ಧಾತ್ಮಕ ಪರೀಕ್ಷೆ

ವಿಜಯಪುರ: ವಿವಿಧ ನಿಗಮ ಮಂಡಳಿಗಳ ನೇಮಕಾತಿಗೆ ಜಿಲ್ಲೆಯ ೬೪ ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ ೨೮ ಹಾಗೂ ೨೯ ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು.
ನಗರದ ಗಾಂಧಿವೃತ್ತದಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್ ಶಾರದಾ ಭವನದಲ್ಲಿ ಗುರುವಾರ ಆಯೋಜಿಸಿದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವ್ಯವಸ್ತಿತ ಪರೀಕ್ಷೆಗಾಗಿ ೨೧ ಮಾರ್ಗಾಧಿಕಾರಿಗಳ ತಂಡ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ೬೪ ವೀಕ್ಷಕರು ಪ್ರತಿ ಪರೀಕ್ಷಾ ಕೇಂದ್ರಕ್ಕೆ ೦೧ ಉಪ ಮುಖ್ಯ ಅಧೀಕ್ಷಕರು ೦೧ ಪ್ರಶ್ನೆಪತ್ರಿಕೆ ಪಾಲಕರು ಮತ್ತು ೦೧ ವಿಶೇಷ ಸ್ಥಾನಿಕ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ. ಅಕ್ಟೋಬರ್ ೨೮ರಂದು ನಡೆಯುವ ಪತ್ರಿಕೆ-೧ ಪರೀಕ್ಷೆಗೆ ೧೪೨೮೦ ಹಾಗೂ ಪತ್ರಿಕೆ-೨ ಪರೀಕ್ಷೆ ೧೪೩೭೫, ಅಕ್ಟೋಬರ್ ೨೯ ರಂದು ನಡೆಯುವ ಪತ್ರಿಕೆ-೧ ಪರೀಕ್ಷೆ ೨೪೧೮೯ ಹಾಗೂ ಪತ್ರಿಕೆ-೨ ಪರೀಕ್ಷೆಗೆ ೨೪೧೮೭ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಖಜಾನೆಯಿಮದ ಪರೀಕ್ಷಾ ಕೇಂದ್ರಗಳಿಗೆ ರಹಸ್ಯ ಬಂಡಲ್‌ಗಳನ್ನು ರವಾನೆ ಮಾಡಲು ನಿಯೋಜಿಸಿದ ಮಾರ್ಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಡ್ಡಾಯವಾಗಿ ತಮ್ಮ ವಾಹನದಲ್ಲಿಯೇ ರಹಸ್ಯ ಬಂಡಲ್‌ಗಳನ್ನು ಸರಬರಾಜು ಮಾಡಬೇಕು. ಪರೀಕ್ಷೆ ಮುಗಿದ ನಂತರ ಮರಳಿ ಜಿಲ್ಲಾ ಖಜಾನೆಗೆ ಒಪ್ಪಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಅಕ್ಟೋಬರ್ ೨೮ ಹಾಗೂ ೨೯ ರಂದು ಜಿಲ್ಲೆಯ ೧೧ ತಾಲೂಕುಗಳ ಒಟ್ಟು ೬೪ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಅಕ್ಟೋಬರ್ ೨೮ ರಂದು ಆಪ್ತ ಕಾರ್ಯದರ್ಶಿ-ಹಿರಿಯ ಸಹಾಯಕರು, ಪ್ರಥಮ ದರ್ಜೆ ಸಹಾಯಕ, ಸೇಲ್ಸ್ ಮೇಲ್ವಿಚಾರಕರು ಮುಂತಾದ ಸಮನಾದ ಹುದ್ದೆಗಳಿಗೆ ಬೆಳಿಗ್ಗೆ ೧೦-೩೦ರಿಂದ ಮಧ್ಯಾಹ್ನ ೧೨-೩೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೨-೩೦ರಿಂದ ಸಂಜೆ ೪-೩೦ರವರೆಗೆ ಪತ್ರಿಕೆ-೨ ಪರೀಕ್ಷೆಗಳು ಹಾಗೂ ಅಕ್ಟೋಬರ್ ೨೯ ರಂದು ದ್ವೀತಿಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರು ಮುಂತಾದ ಸಮನಾದ ಹುದ್ದೆಗಳಿಗೆ ಬೆಳಿಗ್ಗೆ ೧೦-೩೦ರಿಂದ ಮಧ್ಯಾಹ್ನ ೧೨-೩೦ರವರೆಗೆ ಪತ್ರಿಕೆ-೧ ಹಾಗೂ ಮಧ್ಯಾಹ್ನ ೨-೩೦ರಿಂದ ಸಂಜೆ ೪-೩೦ರವರೆಗೆ ಪತ್ರಿಕೆ-೨ ಪರೀಕ್ಷೆ ಜರುಗಲಿವೆ.
ಸಭೆಯಲ್ಲಿ ಖಜಾನಾಧಿಕಾರಿ ಹಣಮಂತ ಕಾತರಕಿ, ಪದವಿಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪಿ.ಹೊಸಮನಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಪ್ರಾಂಶುಪಾಲ ಸಿ.ಬಿ.ನಾಟಿಕಾರ ಸೇರಿದಂತೆ ವಿವಿಧ ತಹಶೀಲ್ದಾರರು, ಪರೀಕ್ಷಾ ಮೇಲ್ವಿಚಾರಕರು, ವೀಕ್ಷಕರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.