ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿರುವ ಒಟ್ಟು ೨,೨೫,೭೭೯ ಮತದಾರರು ಪೈಕಿ, ೨,೧೪,೨೨೮ ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದೆ ಎಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.
ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ೨,೨೫,೭೭೯ ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಈ ಪೈಕಿ ೧,೯೩,೪೮೮ ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ೧೭೯ ಮತದಾರರು ನಮೂನೆ ಸಲ್ಲಿಸಿದ್ದಾರೆ. ೫೯೬ ಮತದಾರರು ಗೈರು ಉಳಿದಿದ್ದರೆ, ೧೦,೨೬೧ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದರೆ , ೪೬೧೫ ಮತದಾರರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ೧೮೦೩ ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದರೆ.
ಮತದಾರರು ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್:voಣeಡಿs.eಛಿi.gov.iಟಿ ಅಥವಾ ಛಿeoಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಜಿಲ್ಲಾ ವೆಬ್ ಪೋರ್ಟಲ್ viರಿಚಿಥಿಚಿಠಿuಡಿಚಿ.ಟಿiಛಿ.iಟಿ/eಟಿ/ ಸಂಪರ್ಕಿಸಬಹುದಾಗಿದೆ.
ಬಬಲೇಶ್ವರ ಮತ್ತು ತಿಕೋಟಾ ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಲಾಗಿರುವ ಮತದಾರರ ಸಹಾಯವಾಣಿ ಕೇಂದ್ರ ಹಾಗೂ ಗ್ರಾಮ ಪಂಚಾಯತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
