ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಜಯಪುರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಸಹಯೋಗದಲ್ಲಿ
ಪೂಜ್ಯ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಆಗಸ್ಟ್ ೧ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಗಾಂಧಿ ಚೌಕ ಹತ್ತಿರ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಶಾಸಕರು, ಜನಪ್ರತಿನಿಧಿಗಲು ಭಾಗವಹಿಸಲಿದ್ದಾರೆ.
ಡಾ. ಮಂಜುನಾಥ್ ಮಸಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
