ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ತಾಲ್ಲೂಕಿನ ಬಣಜಿಗ ಸಮುದಾಯದ ಕ್ಷೇಮಾಭಿವೃದ್ಧಿ ಸಂಘದಿಂದ ದಿ:೧ ರಂದು (ಇಂದು) ೨ಎ ಮೀಸಲಾತಿಗಾಗಿ ಆಗ್ರಹಿಸಿ ಸಭೆ ಕೈಗೊಂಡು, ಮನವಿ ಸಲ್ಲಿಸಲಾಗುತ್ತಿದೆ.
ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಸಿಂದಗಿ ರಸ್ತೆಯಲ್ಲಿನ ಮಡಿವಾಳ ಮಾಚಿದೇವರ ದೇವಸ್ಥಾನದಲ್ಲಿ ಸಮುದಾಯದ ಸಭೆ ಜರುಗಲಿದೆ. ನಂತರ ಮೌನ ಮೆರವಣಿಗೆಯೊಂದಿಗೆ ಮೊಹರೆ ಹಣಮಂತ್ರಾಯ ವೃತ್ತ, ಬಸ್‌ನಿಲ್ದಾಣ ಮಾರ್ಗ, ಅಂಬೇಡ್ಕರ್ ವೃತ್ತ, ಇಂಡಿ ರಸ್ತೆಯ ಮೂಲಕ ತಹಶೀಲ್ದಾರ ಕಾರ್ಯಾಲಯ ತಲುಪಿ ಮನವಿ ಸಲ್ಲಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಬಣಜಿಗ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಕೈಗೊಂಡ ಮೀಸಲಾತಿ ಹೋರಾಟಕ್ಕೆ ಹೆಚ್ಚಿನ ಬಲ ತುಂಬಲು ಸಂಘದ ಪ್ರಕಟಣೆ ತಿಳಿಸಿದೆ.
