Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೀಮಾ ನೀರಿನ ಹರಿವು ಹೆಚ್ಚಳ: ನದಿ ತೀರದಲ್ಲಿ ಹೈಅಲರ್ಟ್
(ರಾಜ್ಯ ) ಜಿಲ್ಲೆ

ಭೀಮಾ ನೀರಿನ ಹರಿವು ಹೆಚ್ಚಳ: ನದಿ ತೀರದಲ್ಲಿ ಹೈಅಲರ್ಟ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾರಾಷ್ಟ್ರದಿಂದ 1.43 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ | ಜನರು ನದಿಗೆ ಇಳಿಯದಂತೆ ಮನವಿ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಮಹಾರಾಷ್ಟ್ರದ ಭೀಮಾ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಜನಿ ಹಾಗೂ ವೀರ್ ಜಲಾಶಯಗಳಿಂದ ಒಟ್ಟು 1.43 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ಮುಂದಿನ 24 ಗಂಟೆಗಳಲ್ಲಿ ಆಲಮೇಲ ತಾಲೂಕಿನ ದೇವಣಗಾಂವ- ಸೊನ್ನ ಗ್ರಾಮಗಳ ಸಮೀಪದ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜ್ ತಲುಪುವ ಸಾಧ್ಯತೆ ಇದೆ.
ಇದರಿಂದ ಭೀಮಾ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ನದಿ ತೀರದ ಗ್ರಾಮಗಳು ಹಾಗೂ ಪುಣ್ಯಕ್ಷೇತ್ರಗಳಲ್ಲಿ ಎಚ್ಚರಿಕೆ ವಹಿಸುವಂತೆ ಅಫಜಲಪುರ ಕೆಎನ್‌ಎನ್‌ಎಲ್‌ ಕಾರ್ಯಪಾಲಕ ಎಂಜಿನಿಯರ್ ಸಂತೋಷಕುಮಾರ ಸಜ್ಜನ್ ತಿಳಿಸಿದ್ದಾರೆ.
ಉಜನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ಹಾಗೂ ವೀರ್ ಜಲಾಶಯದಿಂದ 63 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಮೇಲ್ಭಾಗದಲ್ಲಿ ಮಳೆ ಮುಂದುವರಿದಿರುವುದರಿಂದ ನೀರಿನ ಬಿಡುಗಡೆಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅವರು ಹೇಳಿದರು.
ಪ್ರಸ್ತುತ ಭೀಮಾ ಏತ ನೀರಾವರಿ ಯೋಜನೆಯ ಸೊನ್ನ ಬ್ಯಾರೇಜ್ ನಲ್ಲಿ ಶುಕ್ರವಾರ 44 ಸಾವಿರ ಕ್ಯೂಸೆಕ್ ಒಳಹರಿವು ಮತ್ತು 43 ಸಾವಿರ ಕ್ಯೂಸೆಕ್ ಹೊರಹರಿವು ದಾಖಲಾಗಿದ್ದು, ನಾಳೆಯಿಂದ ನೀರಿನ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಭೀಮಾ ನದಿ ಪಾತ್ರದ ಜನರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ವಿಶೇಷವಾಗಿ ಪುಣ್ಯಕ್ಷೇತ್ರಗಳಾದ ಮಣೂರ, ಘತ್ತರಗಿ ಹಾಗೂ ದೇವಲ ಗಾಣಗಾಪೂರ ಪುಣ್ಯಕ್ಷೇತ್ರಗಳಿಗೆ ಆಗಮಿಸುವ ಭಕ್ತರು ಪುಣ್ಯಸ್ನಾನಕ್ಕಾಗಿ ನದಿಗೆ ಇಳಿಯಬಾರದು. ನದಿ ತೀರದಲ್ಲಿ ಸೆಲ್ಫಿ, ಈಜು ಅಥವಾ ಇತರ ಅಪಾಯಕಾರಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತವು ನದಿಯ ನೀರಿನ ಮಟ್ಟದ ಮೇಲೆ ನಿರಂತರ ನಿಗಾ ವಹಿಸಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನದಿ ತೀರದ ಗ್ರಾಮಗಳ ನಿವಾಸಿಗಳು ಮತ್ತು ಭಕ್ತರು ಎಚ್ಚರಿಕೆಯಿಂದ ವರ್ತಿಸಿ, ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.