ಉದಯರಶ್ಮಿ ದಿನಪತ್ರಿಕೆ
ತಾಳಿಕೋಟಿ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕರಾದ ಡಿ.ವಿ.ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪರ್ಪಾಣೆ ಸಲ್ಲಿಸುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾದ ಮೈಬೂಬಸುಬಾನಿ ಸಿರಸಗಿ, ಪ್ರಧಾನ ಕಾರ್ಯದರ್ಶಿ ಶಿವಾನಂದ ಸಜ್ಜನ, ಕಾರ್ಯದರ್ಶಿ ಯಲಗೂರಪ್ಪ ವಡವಡಗಿ ಸೇರಿದಂತೆ ಅನೇಕ ಸದಸ್ಯರು ಭಾಗಿಯಾಗಿದ್ದರು.

