Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ
(ರಾಜ್ಯ ) ಜಿಲ್ಲೆ

ವ್ಯಸನಗಳಿಂದ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ರವಿಶಂಕರ್ ಬಿ.ಎಸ್. ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ (ಜಮಖಂಡಿ): ವ್ಯಸನ ಎನ್ನುವುದು ಕೇವಲ ಮದ್ಯ, ಗುಟ್ಕಾ, ಸಿಗರೇಟ್ ಅಥವಾ ಮಾದಕ ವಸ್ತುಗಳ ಸೇವನೆಗೆ ಮಾತ್ರ ಸೀಮಿತವಲ್ಲ. ಸಮಯದ ದುರ್ಬಳಕೆ, ಮೊಬೈಲ್‌ಗಳ ಅತಿಯಾದ ಬಳಕೆ ಸೇರಿದಂತೆ ಜೀವನಶೈಲಿಯಲ್ಲಿನ ಅನಾರೋಗ್ಯಕರ ಅಭ್ಯಾಸಗಳೂ ವ್ಯಸನಗಳೇ ಆಗಿದ್ದು, ಇವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತವೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ರವಿಶಂಕರ್ ಬಿ.ಎಸ್. ಹೇಳಿದರು.
ಡಾ.ಮಹಾಂತ ಶಿವಯೋಗಿ ಸ್ವಾಮೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಆರ್.ಎಸ್. ಕಾಗವಾಡೆ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸುವ ಹೊಣೆಗಾರಿಕೆ ಪೋಷಕರ ಮೇಲಿದೆ. ಇಂದಿನ ಯುವಜನತೆಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರನ್ನು ದುಶ್ಚಟಗಳಿಂದ ದೂರವಿಡಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರ ದುಶ್ಚಟಗಳ ವಿರುದ್ಧದ ಹೋರಾಟವನ್ನು ಬಿಂಬಿಸುವ ಜಾಗೃತಿ ನಾಟಕವನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿದರು.
ಪ್ರೊ. ಕೆ.ಜೆ. ಜೀರಗಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೊ. ಪ್ರೇಮಾನಂದ ಹಿರೇಮಠ ವ್ಯಸನಮುಕ್ತ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಶಿಕ್ಷಣಾರ್ಥಿಗಳಾದ ಅಭಿಷೇಕಗೌಡ ಪಾಟೀಲ ಹಾಗೂ ಪ್ರತಿಭಾ ಜಂಬಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸೌಜನ್ಯ ಕೊಣ್ಣೂರ ಪ್ರಾರ್ಥನೆ ಸಲ್ಲಿಸಿದರು. ಕಮಲವ್ವ ಒನಕಿ ಸ್ವಾಗತಿಸಿದರು. ರವೀನಾ ನದಾಫ್ ಪರಿಚಯಿಸಿದರು. ಪ್ರದೀಪ ಹುಕ್ಕೇರಿ ಹಾಗೂ ರೇಣುಕಾ ಚಂಡಕಿ ಕಾರ್ಯಕ್ರಮ ನಿರೂಪಿಸಿದರು. ಕಾಡಪ್ಪ ಜನವಾಡ ವಂದನಾರ್ಪಣೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.