ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಆ.೮ ರಿಂದ ೧೦ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ ೮ರಂದು ಮಧ್ಯಾಹ್ನ ವಿಜಯಪುರಕ್ಕೆ ಆಗಮಿಸುವ ಅವರು, ಮಧ್ಯಾಹ್ನ ೩ ರಿಂದ ೪:೩೦ರವರೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಸಂಜೆ ೫ ಗಂಟೆಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು ಅಂದು ವಾಸ್ತವ್ಯ ಮಾಡುವರು.
ಆಗಸ್ಟ್ ೧೦ರಂದು ಮಧ್ಯಾಹ್ನ ೧:೩೦ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
