ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ೧೬,೬೬,೮೮೨ ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ೪,೦೪೭ ಮತದಾರರು ಗಣತಿ ನಮೂನೆ ಸಲ್ಲಿಸಿದ್ದಾರೆ. ೧,೪೫,೧೬೨ ಶಾಶ್ವತವಾಗಿ ಸ್ಥಳಾಂತರಗೊಂಡರೆ, ೫೩,೫೮೮ ಮತದಾರರು ಮರಣ ಹೊಂದಿದ್ದಾರೆ. ೬೧,೫೦೨ ಮತದಾರರು ಗೈರು-ಸಂಗ್ರಹಿಸಲಾಗದ ಉಳಿದಿದ್ದಾರೆ. ೨೮,೪೯೬ ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಮುದ್ದೇಬಿಹಾಳ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿ.ಎಲ್.ಒ ಗಳಿಂದ ಪ್ರಕ್ರಿಯೆ ಮುಂದುವರಿದಿದೆ.
ಸಾರ್ವಜನಿಕರು ಮತ್ತು ಮತದಾರರು ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

