Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಶುವಿಗೆ ಹಾಲುಣಿಸಿ ಸೋಂಕಿನಿಂದ ದೂರವಿಡಿ :ಡಿಎಚ್‌ಒ ಡಾ.ಮಲ್ಲನಗೌಡ
(ರಾಜ್ಯ ) ಜಿಲ್ಲೆ

ಶಿಶುವಿಗೆ ಹಾಲುಣಿಸಿ ಸೋಂಕಿನಿಂದ ದೂರವಿಡಿ :ಡಿಎಚ್‌ಒ ಡಾ.ಮಲ್ಲನಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು, ಸದೃಢ ಮಗುವಿನ
ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿರಾದಾರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ, ಸುಸೇನಾ ಹೆಲ್ತ್ ಪೌಂಡೇಶನ್, ದಾತ್ರಿ ಮದರ್ಸ ಮಿಲ್ಕ್ ಬ್ಯಾಂಕ್ ಮತ್ತು ಸಿ.ಎಲ್.ಎಮ್.ಸಿ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವರ್ಷದ ಘೋಷವಾಕ್ಯದಂತೆ ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನ ಸದೃಢಗೊಳಿಸೋಣ ಎಂಬ ಸಂದೇಶವನ್ನು ಎಲ್ಲ ತಾಯಿಂದರಿಗೆ ಸಮರ್ಪಕವಾಗಿ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಗರ್ಭಿಣಿ ಹಾಗೂ ಬಾಣಂತಿಯರಿಗಾಗಿ ಮತ್ತು ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ತಾಯಿ ತನ್ನ ಎದೆಹಾಲು ಉಣಿಸುವುದರಿಂದ ಮಗುವಿನ ಆರೋಗ್ಯದಲ್ಲಿ ಧನಾತ್ಮಕ ಪರಿಣಾಮಗಳಾಗುತ್ತವೆ. ಮಗುವಿನ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ಅಂತರ ಹೊಂದುವುದುರಿಂದ ಅಂಡಾಶಯ ಕ್ಯಾನ್ಸರ್ ಮತ್ತು ಅಧಿಕ ರಕ್ತದೊತ್ತಡ ಕಡಿಮೆ ಮಾಡಲು ಸಾಧ್ಯವಿದೆ ಎಂದ ಅವರು, ಮಗುವಿಗೆ ಹಾಲುಣಿಸುವಿಕೆಯಿಂದ ಸಾಂಕ್ರಾಮಿಕ ಕಾಯಿಲೆಗಳಾದ ಅತಿಸಾರ, ಉಸಿರಾಟದ ಸೋಂಕುಗಳನ್ನು ದೂರವಿಡಬಹುದು ಎಂದು ಹೇಳಿದರು.
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಪರಸುರಾಮ ಹಿಟ್ನಳ್ಳಿ ಮಾತನಾಡಿ, ತಾಯಿ ಹಾಗೂ ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ತಾಯಿಯ ಎದೆ ಹಾಲಿಗೆ ಪ್ರಪಂಚದಲ್ಲಿ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಎದೆ ಹಾಲುಣಿಸುವ ಮೂಲಕ ದೇಶದ ಆರೋಗ್ಯವಂತ ಪ್ರಜೆಯನ್ನಾಗಿ ರೂಪಿಸಬೇಕು. ಹುಟ್ಟಿದ ಮಗುವಿಗೆ ಅರು ತಿಂಗಳವರೆಗೆ ತಾಯಿಯ ಎದೆ ಹಾಲುಣಿಸಬೇಕು. ಮಗು ಬೇರೆ ಪದಾರ್ಥಗಳನ್ನು ಸೇವಿಸುವ ಮಗುವಿಗಿಂತ ಕಾಯಿಲೆಗೊಳಗಾಗುತ್ತದೆ ಮತ್ತು ಹೆಚ್ಚು ಆರೋಗ್ಯಕರವಾಗಿರುತ್ತದೆ ಎಂದರು.
ತಾಲೂಕಾ ಆರೋಗ್ಯಾಧಿಕಾರಿ ಡಾ. ಸಂತೋಷ ಶೆಟ್ಟಿ ಮಾತನಾಡಿ, ಮಗುವಿಗೆ ಎದೆ ಹಾಲು ಅಮೃತವಿದ್ದಂತೆ. ಪೌಷ್ಠಿಕ ಆಹಾರವನ್ನು ತಾಯಂದಿರು ಸೇವಿಸಬೇಕು. ಯಾವುದಕ್ಕೂ ಮಗುವಿಗೆ ಎದೆ ಹಾಲು ನೀಡುವುದನ್ನು ತಪ್ಪಿಸಬಾರದು. ಎಲ್ಲ ತಾಯಂದಿರು ತಮ್ಮ ಮಗುವಿಗೆ ಹುಟ್ಟಿನಿಂದ ೨ ವರ್ಷದ ವರೆಗೆ ತಾಯಿ ಹಾಲುಣಿಸಬೇಕು ಎಂದರು.
ಜಿಲ್ಲಾ ಆಸ್ಪತ್ರೆಯ ದಾತ್ರಿ ಮದರ್ಸ ಮಿಲ್ಕ್ ಬ್ಯಾಂಕ್ ನ ಡಾ. ಗಾಯತ್ತಿ ಮಿಸಾಳೆ ಮಾತನಾಡಿ, ತಾಯಿ ಎದೆ ಹಾಲು ಅಗತ್ಯವಿರುವ ನವಜಾತ ಶಿಶುಗಳಿಗೆ ದಾನಿಗಳಿಂದ ಪಡೆದ ತಾಯಂದಿರ ಹಾಲನ್ನು ಶಿಶುಗಳಿಗೆ ನೀಡಲಾಗುತ್ತದೆ. ಈ ಮಹತ್ವದ ಸೇವೆಯನ್ನು ಎಲ್ಲ ತಾಯಂದಿರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ತಾಯಂದಿರು ಜಿಲ್ಲಾ ಆಸ್ಪತ್ರೆಯ ದಾತ್ರಿ ಮದರ್ಸ ಮಿಲ್ಕ್ ಬ್ಯಾಂಕ್ ವಿಜಯಪುರಲ್ಲಿ ನೀಡುವಂತೆ ತಿಳಿಸಿದರು. ಯಾವ ತಾಯಿ ಮಗುವಿಗೆ ಪೌಡರ್ ಹಾಲ ಮತ್ತು ಸಕ್ಕರೆ ನೀರನ್ನು ಮಗುವಿಗೆ ನೀಡಬಾರದೆಂದರು.
ಬಾಂಗಿ ಎಜುಕೇಶನ್ ಮತ್ತು ಸೋಷಿಯಲ್ ಟ್ರಸ್ಟ್ ನ ಡಾ. ಮುನೀರ ಭಾಂಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ. ಸೈಯಿದಾಜಿಭಾ ಭಾಂಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೋಳೂರ, ರೇಖಾ ದಶವಂತ, ಶಂಕರ ಚಲವಾದಿ, ಎನ್. ಆರ್. ಬಾಗವಾನ, ಸುರೇಂದ್ರ ಮಾನಕರ, ಭಾಂಗಿ ನರ್ಸಿಂಗ್, ಡೋಣೂರ, ಕಾಲೇಜಿನ ಜುಬೇರ ಪ್ರಾಂಶುಪಾಲರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
  • ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯಿಂದ ವಂಚಿತ ಇಂಗಳೇಶ್ವರ ಗ್ರಾಮ
    In (ರಾಜ್ಯ ) ಜಿಲ್ಲೆ
  • ಶಿಶುವಿಗೆ ಹಾಲುಣಿಸಿ ಸೋಂಕಿನಿಂದ ದೂರವಿಡಿ :ಡಿಎಚ್‌ಒ ಡಾ.ಮಲ್ಲನಗೌಡ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನೇರ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೬.೬೬ ಲಕ್ಷಕ್ಕೂ ಅಧಿಕ ಗಣತಿ ನಮೂನೆ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಯುವನಿಧಿ ಸದ್ಬಳಕೆ ಮಾಡಿಕೊಳ್ಳಲು ತಾಪಂ ಇಒ ಸಲಹೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.