ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸಚಿವ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಿಂದಗಿ ತಾಲೂಕು ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮಾನ್ಯ ಲಕ್ಷ್ಮಣ ಸವದಿ ಅವರ ರಾಜಕೀಯ ಮುತ್ಸದ್ದಿತನ ಹಾಗೂ ಜನಪರ ದೃಷ್ಟಿಕೋನವು ರಾಜ್ಯದ ಸಮಗ್ರ ಪ್ರಗತಿಗೆ ಸಾಕ್ಷಿಯಾಗಲಿದೆ. ಅವರ ಸಚಿವ ಅವಧಿಯಲ್ಲಿ ಹಿಂದುಳಿದ ವರ್ಗಗಳ ಏಳಿಗೆ ಹಾಗೂ ಉತ್ತರ ಕರ್ನಾಟಕ ಭಾಗದ ನನೆಗುದಿಗೆ ಬಿದ್ದಿರುವ ನೀರಾವರಿ ಸೇರಿದಂತೆ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಹೊಸ ವೇಗ ಸಿಗಲಿದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ. ಭಗವಂತನು ಅವರಿಗೆ ಸಾರ್ವಜನಿಕ ಸೇವೆ ಮಾಡಲು ಹೆಚ್ಚಿನ ಶಕ್ತಿಯನ್ನು ಕರುಣಿಸಲಿ” ಎಂದು ಮನಗೂಳಿ ಶುಭ ಹಾರೈಸಿದ್ದಾರೆ.

