Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹ ಸಚಿವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನಾ ರ್‍ಯಾಲಿ
(ರಾಜ್ಯ ) ಜಿಲ್ಲೆ

ಗೃಹ ಸಚಿವರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನಾ ರ್‍ಯಾಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಚಿವ ಎಂ.ಬಿ.ಪಾಟೀಲರೂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ | ಮರು ಪರೀಕ್ಷೆ ನಡೆಸಲಿ | ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಿಕೋಟಾ ಪಟ್ಟಣದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದ್ದು, ಕೂಡಲೇ ಈ ವಿಷಯವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಎಂ.ಬಿ. ಪಾಟೀಲರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಹಾಗೂ ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂಧ ಆರಂಭಗೊಂಡ ರ‍್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.
ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ತಿಕೋಟಾ ಪಟ್ಟಣದಲ್ಲಿ ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡಿದೆ, ಓಎಂಆರ್ – ಪ್ರಶ್ನೆ ಪತ್ರಿಕೆ ಗೊಂದಲ ಬಗೆ ಹರಿಸುವುದನ್ನು ಬಿಟ್ಟು ಅದನ್ನು ಪ್ರಶ್ನಿಸಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡಿ ಅಮಾನವೀಯ ರೀತಿಯಲ್ಲಿ ವರ್ತಿಸಿದೆ, ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದರೆ ಅದನ್ನು ಪ್ರಶ್ನಿಸುವುದು ಅಪರಾಧವೇ ಎಂದು ಖಾರವಾಗಿ ಪ್ರಶ್ನಿಸಿದರು.
ಈ ವಿಷಯವಾಗಿ ಅಧಿಕಾರಿಗಳು ನಿಷ್ಪಕ್ಷಪಾತದಿಂದ ವರ್ತಿಸಬೇಕು ಹೊರತು ಆಡಳಿತಾರೂಢ ಪಕ್ಷದ ಅಣತಿಯಂತೆ ವರ್ತಿಸಬಾರದು, ವಿದ್ಯಾರ್ಥಿಗಳಿಗೆ ಕೂಡಲೇ ನ್ಯಾಯ ಒದಗಿಸಬೇಕಾದ ಕೆಲಸ ಮಾಡಬೇಕಿದ್ದು, ಕೂಡಲೇ ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು, ಶೀಘ್ರವೇ ಗೊಂದಲಕ್ಕೆ ಕಾರಣವಾದವರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಈ ಎಲ್ಲ ವಿಷಯಗಳಿಗೂ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಎಂ.ಬಿ. ಪಾಟೀಲರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳು ಸಾಕಷ್ಟು ಆತಂಕಗೊಂಡಿದ್ದು ಕೂಡಲೇ ಮರು ಪರೀಕ್ಷೆ ನಡೆಸುವಂತೆ ಪ್ರತಿಭಟನಾ ನಿರತರರು ಹಕ್ಕೊತ್ತಾಯ ಮಂಡಿಸಿದರು.
ಪಾಲಿಕೆ ಸದಸ್ಯೆ ಹಾಗೂ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಮಾತನಾಡಿ, ವಿದ್ಯಾರ್ಥಿಗಳು ಅನ್ಯಾಯವನ್ನು, ಅಕ್ರಮವನ್ನು ಪ್ರಶ್ನಿಸಿದ್ದಾರೆ, ಆದರೆ ವಿದ್ಯಾರ್ಥಿಗಳಿಗೆ ಲಾಠಿ ಪ್ರಹಾರ ನಡೆಸಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಮುಖಂಡರಾದ ಮಂಜುನಾಥ ಮೀಸೆ, ವಿಜಯಕುಮಾರ ಕುಡಿಗನೂರ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಉಮೇಶ ಕಾರಜೋಳ, ವಿವೇಕ ಡಬ್ಬಿ, ಬಸವರಾಜ ಬೈಚಬಾಳ, ಗೋಪಾಲ ಘಟಕಾಂಬಳೆ, ಮಹೇಂದ್ರ ನಾಯಕ, ಶರತ್ ಬಿರಾದಾರ, ಚಿದಾನಂದ ಚಲವಾದಿ, ಪ್ರಕಾಶ ಮಿರ್ಜಿ, ಈರಣ್ಣ ರಾ ರಾವೂರ್. ಸಾಬು ಮಾಶ್ಯಾಳ, ಮಳುಗೌಡ ಪಾಟೀಲ, ರಮೇಶ ಮಸಬಿನಾಳ, ಸಿದ್ದು ಬುಳ್ಳಾ, ಜಗು ಮುಚ್ಚಂಡಿ, ಸಂದೀಪ ಪಾಟೀಲ, ಗುರು ತಳ್ವಾರ್ ರಾಜೇಶ ತಾವಸೆ, ಕೃಷ್ಣಾ ಗುನ್ನಾಳಕರ, ರಾಘವೇಂದ್ರ ಕಾಪಸೆ, ಆನಂದ ಮುಚ್ಚಂಡಿ, ವಿಜಯ ಜೋಶಿ, ಕಾಂತು ಶಿಂಧೆ, ಮಲ್ಲಮ್ಮ ಜೋಗೂರ, ಭಾರತಿ ಭುಯ್ಯಾರ, ರಾಮಚಂದ್ರ ಚವ್ಹಾಣ, ಅಶೋಕ ರಾಠೋಡ, ಸಂತೋಷ ಕುರದೊಡ್ಡಿ, ಭರತ ಕೋಳಿ, ಚಿನ್ನು ಚಿನಗುಂಡಿ, ಮಂಥನ ಗಾಯಕವಾಡ, ಮಹಾನಗರ ಪಾಲಿಕೆಯ ಉಪಮಾಪೌರರಾದ ಶ್ರೀಮತಿ ಸುಮಿತ್ರಾ ಜಾಧವ, ಬಸವರಾಜ ರೆಡ್ಡಿ, ಬಸವರಾ ಮನ್ಸೂರ್, ವಿವೇಕ ತಾವರೇಗೇರಿ, ವಿಕಾಸ ಪದಕಿ, ಪ್ರಫುಲ್ ಪವಾರ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.