ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರದ ಯೋಜನೆಗಳ ಅನುಷ್ಠಾನವು ಗುಣಮಟ್ಟ ಮತ್ತು ಸಮಯಕ್ಕೆ ಸರಿಯಾಗಿ ಆಗಬೇಕು ಎಂಬ ಉದ್ದೇಶದಿಂದ ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆನಂದಕುಮಾರ ಮ್ಯಾಗೇರಿ ಅವರು ಮಂಗಳವಾರ ತಾಲೂಕಿನ ಟಕ್ಕಳಕಿ ಮತ್ತು ಘೋಣಸಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಮಾತನಾಡಿದರು.
ವಿ-ಬಿ ಜಿ ರಾಮ ಜಿ ಯೋಜನೆಯಡಿ ಪ್ರತಿ ದಿನ ಕನಿಷ್ಠ 200 ರಿಂದ 300 ಜನರಿಗೆ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಿದರು.
ನಂತರ ಕೂಲಿಕಾರರೊಡನೆ ಸಂವಾದ ನಡೆಸಿದ ಅವರು, “ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ನೇರವಾಗಿ ತಲುಪಬೇಕು. ಕಾಮಗಾರಿಯಲ್ಲಿ ಯಾವುದೇ ವಿಳಂಬವಾಗಬಾರದು ಮತ್ತು ನಿಗದಿತ ಮಾನದಂಡದಂತೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರ ಜೊತೆಗೆ ಪಾರದರ್ಶಕತೆಗೆ ಆದ್ಯತೆ ನೀಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಬಸವರಾಜ ಸಂಕಗೊಂಡ, ಟಕ್ಕಳಕಿ ಪಿಡಿಓ ಶ್ರೀಮತಿ ಅಕ್ಕಮಹಾದೇವಿ ಪವಾರ, ಘೋಣಸಗಿ ಪಿಡಿಓ ಉಮೇಶ ಕನಮಡಿ, ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಕೂಲಿಕಾರರು ಸಂಘದ ಸದಸ್ಯರುಗಳು ಹಾಜರಿದ್ದರು.

