ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೬–೨೭ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ವ್ಯಾಲ್ಯೂ ಆಡೆಡ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸುಗಳ ಪ್ರಥಮ ವರ್ಷದ ಪ್ರವೇಶಕ್ಕಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಯುಯುಸಿಎಂಎಸ್ (UUಅಒS) ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ ೧೭, ೨೦೨೬ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಆಗಸ್ಟ್ ೧೭ರವರೆಗೆ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವುದೇ ದಂಡ ಅನ್ವಯಿಸುವುದಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಮುದ್ರಿತ ಪ್ರತಿಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಸಂಬಂಧಿತ ಸ್ನಾತಕೋತ್ತರ ವಿಭಾಗಗಳಿಗೆ ಆಗಸ್ಟ್ ೧೮ರೊಳಗೆ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ ೧೯-೨೧ರ ವರೆಗೆ ವಿಶ್ವವಿದ್ಯಾನಿಲಯದಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನಡೆಸಿ, ಕೌನ್ಸೆಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ ಅಥವಾ ಸಂಬಂಧಿತ ಸ್ನಾತಕೋತ್ತರ ವಿಭಾಗಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
