Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ದತ್ತ ಇಂಡಿಯಾ ಕಾರ್ಖಾನೆಯಲ್ಲಿ ರೈತರಿಗೆ ಸಕ್ಕರೆ ವಿತರಣೆ
(ರಾಜ್ಯ ) ಜಿಲ್ಲೆ

ಶ್ರೀ ದತ್ತ ಇಂಡಿಯಾ ಕಾರ್ಖಾನೆಯಲ್ಲಿ ರೈತರಿಗೆ ಸಕ್ಕರೆ ವಿತರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಸಕ್ಕರೆ ಕಾರ್ಖಾನೆಯ ವತಿಯಿಂದ 2025-26ನೇ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಟನೇಜ್ ಆಧಾರದ ಮೇಲೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಖಾನೆಯ ವ್ಯಾಪ್ತಿಯ ಒಳಗಿನ ಹಾಗೂ ಹೊರಗಿನ ಕಬ್ಬು ಬೆಳೆಗಾರ ರೈತರಿಗೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಅರ್ಧ ಕೆ.ಜಿ. ಸಕ್ಕರೆಯನ್ನು ಕಾರ್ಖಾನೆ ಆವರಣದಲ್ಲಿ ವಿತರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಖಾನೆಯ ಉಪಾಧ್ಯಕ್ಷ ಮೃತ್ಯುಂಜಯ ಶಿಂಧೆ, ರೈತರು ಕಾರ್ಖಾನೆಯ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಹೇಳಿದರು. 2025-26ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಕಬ್ಬಿನ ಬಿಲ್, ಕಟಾವು ಹಾಗೂ ಸಾಗಾಣಿಕೆ ವೆಚ್ಚ ಸೇರಿದಂತೆ ಎಲ್ಲಾ ಪಾವತಿಗಳನ್ನು ನಿಗದಿತ ಸಮಯಕ್ಕೆ ಮಾಡಲಾಗಿದೆ. ಮುಂದಿನ ಹಂಗಾಮಿನಲ್ಲಿಯೂ ಇದೇ ಪಾರದರ್ಶಕತೆ ಹಾಗೂ ಸಮಯಪಾಲನೆಯನ್ನು ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಖಾನೆಯ ವ್ಯಾಪ್ತಿಯೊಳಗಿನ ಹಾಗೂ ಹೊರಗಿನ ಎಲ್ಲಾ ಕಬ್ಬು ಬೆಳೆಗಾರರು ತಮ್ಮ ಬೆಳೆದ ಸಂಪೂರ್ಣ ಕಬ್ಬನ್ನು ನೋಂದಣಿ ಮಾಡಿಸಿ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಾವಿನಾಳ ಕಾರ್ಖಾನೆಗೆ ನುರಿಸಲು ಕಳುಹಿಸುವಂತೆ ಅವರು ಮನವಿ ಮಾಡಿದರು. ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಸೇವೆ ಹಾಗೂ ಸಕಾಲಿಕ ಪಾವತಿಗೆ ಕಾರ್ಖಾನೆ ಆದ್ಯತೆ ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶ್ರಾವಣ ಮಾಸ ಹಾಗೂ ನಾಗ ಪಂಚಮಿ ಹಬ್ಬದ ಅಂಗವಾಗಿ ಕಬ್ಬು ಬೆಳೆಗಾರ ರೈತರಿಗೆ ಶುಭಾಶಯಗಳನ್ನು ತಿಳಿಸಿದ ಮೃತ್ಯುಂಜಯ ಶಿಂಧೆ, ರೈತರು ಮತ್ತು ಕಾರ್ಖಾನೆಯ ನಡುವಿನ ಪರಸ್ಪರ ಸಹಕಾರ ಮತ್ತಷ್ಟು ಬಲವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಜನರಲ್ ಮ್ಯಾನೇಜರ್ ಶರದ್ ಮೋರೆ, ಅಮೋಲ ಶಿಂಧೆ, ಆಡಳಿತಾಧಿಕಾರಿ ರವೀಂದ್ರ ಗಾಯಕವಾಡ, ಜನರಲ್ ಮ್ಯಾನೇಜರ್ ರವಿರಾಜ ಭೋಸಲೆ, ಸಹಾಯಕ ಜನರಲ್ ಮ್ಯಾನೇಜರ್ ಅನಿರುದ್ಧ ಪಾಟೀಲ, ಜಿತೇಂದ್ರ ಮೆಟಕರಿ, ವೆಂಕಟೇಶ ರಾವ್, ವಿನಾಯಕ ಪೂಜಾರಿ, ಚಂದ್ರಕಾಂತ ಬಿರಾಜದಾರ, ಎಚ್.ಆರ್. ಮ್ಯಾನೇಜರ್ ವಿಜಯ ಹತ್ತೂರೆ, ಕೃಷಿ ಅಧಿಕಾರಿಗಳಾದ ರವೀಂದ್ರ ಬಿರಾಜದಾರ, ಸಚಿನ್ ನಿಕ್ಕಂ, ಧನಂಜಯ ಪಾಟೀಲ, ಸಂಗ್ರಾಮ ಸೂರ್ಯವಂಶಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಬೆಳೆಗಾರ ರೈತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.