ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಮೀನುಗಾರರು ಹಾಗೂ ಮೀನು ಮಾರಾಟಗಾರರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯ ವತಿಯಿಂದ ಮತ್ಸ್ಯವಾಹಿನಿ ಯೋಜನೆ ಅಡಿಯಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ತ್ರೀಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯಡಿ ಆಯ್ಕೆಯಾಗುವ ಫಲಾನುಭವಿಗಳು ಮೀನುಗಾರಿಕೆ ಇಲಾಖೆಯ ನಿಯಮಾನುಸಾರ ಸಾಮಾನ್ಯ ವರ್ಗದವರಾಗಿದ್ದಲ್ಲಿ ೧ ಲಕ್ಷ ರೂ. ಭದ್ರತಾ ಠೇವಣಿ ಪಾವತಿಸಬೇಕಿದ್ದು, ವಾಹನದ ಬಳಕೆಗಾಗಿ ಪ್ರತಿ ತಿಂಗಳು ೩,೦೦೦ ರೂ. ಬಾಡಿಗೆ ಪಾವತಿಸಬೇಕಾಗುತ್ತದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೧೨ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ವಿಜಯಪುರ ಮೊ.: ೯೮೪೫೯೨೭೧೧೦ ಹಾಗೂ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮುದ್ದೇಬಿಹಾಳ ಮೊ.: ೯೮೮೦೨೧೦೫೦೫ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
