ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಮತಕ್ಷೇತ್ರದ ಶಾಸಕ ಅಪ್ಪಾಜಿ ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದೇ ಹೋದರೆ ನಾವು ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಹಾಗೂ ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇವೆ ಎಂದ ಕಾಂಗ್ರೆಸ್ ಮುಖಂಡರು ಈಗ ರಾಜೀನಾಮೆ ಕೊಟ್ಟು ತಮ್ಮ ಮಾತಿನಂತೆ ನಡೆದುಕೊಳ್ಳಬೇಕು ಎಂದು ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕ ಮಂಜುನಾಥ್ ಛಲವಾದಿ ಅಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕೆಗೆ ಹೇಳಿಕೆ ನೀಡಿರುವ ಅವರು, ಶಾಸಕರಾಗಿದ್ದಾಗಲೇ ಏನು ಕೆಲಸ ಮಾಡದ ಶಾಸಕರು, ಮಂತ್ರಿಯಾಗಿ ಏನು ಮಾಡಲು ಸದ್ಯ ಎಂಬುದನ್ನು ಮನಗಂಡ ಹೈಕಮಾಂಡ್ ಈ ನಿರ್ಧಾರ ಮಾಡಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ಮತ್ತು ಅವರ ಹೈಕಮಾಂಡ್ ನಮ್ಮ ಮತಕ್ಷೇತ್ರಕ್ಕೆ ಅನ್ಯಾಯ ಮಾಡಿದೆ, ಈ ಅನ್ಯಾಯವನ್ನು ಖಂಡಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕಿನ ಪದಾಧಿಕಾರಿಗಳು ರಾಜೀನಾಮೆ ಕೊಡಬೇಕು, ತಮ್ಮ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲಾಗದ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ತಮ್ಮ ಮಾತಿನ ಮೇಲೆ ನಿಲ್ಲಬೇಕು ಹಾಗೂ ಮತಕ್ಷೇತ್ರದ ಜನತೆಗೆ ಚುನಾವಣೆಯಲ್ಲಿ ನಾನು ಸಚಿವನಗುತ್ತೇನೆ ಎಂದು ಸುಳ್ಳು ಹೇಳಿ ಮತ ಪಡೆದ ಶಾಸಕರು ತಮ್ಮ ರಾಜೀನಾಮೆ ನೀಡಬೇಕು ಎಂದಿದ್ದಾರೆ.

