ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆಯದಿರುವುದು ಇಂಡಿ ಕ್ಷೇತ್ರದ ಜನತೆಯಲ್ಲಿ ತೀವ್ರ ನಿರಾಸೆ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆದಿಬಣಜಿಗ ಸಮಾಜದ ಯುವ ಮುಖಂಡ ಸಚಿನ್ ಗದ್ಯಾಳ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಇಂಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇಂತಹ ಹಿರಿಯ ಹಾಗೂ ಅನುಭವಿಗಳಾದ ಜನಪ್ರತಿನಿಧಿಗೆ ಸಚಿವ ಸ್ಥಾನ ನೀಡದಿರುವುದು ಕ್ಷೇತ್ರದ ಜನರ ಆಶಯಗಳಿಗೆ ವಿರುದ್ಧವಾದ ನಿರ್ಧಾರವಾಗಿದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ನಾಯಕತ್ವವು ಇಂಡಿ ಕ್ಷೇತ್ರದ ಜನರ ಭಾವನೆಗಳನ್ನು ಗೌರವಿಸಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿನ್ ಗದ್ಯಾಳ ಒತ್ತಾಯಿಸಿದರು.

