Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತೀಯ ಜ್ಞಾನ ಪರಂಪರೆ ಆಧುನಿಕ ಸಂಶೋಧನೆಗೆ ದಿಕ್ಸೂಚಿ:
(ರಾಜ್ಯ ) ಜಿಲ್ಲೆ

ಭಾರತೀಯ ಜ್ಞಾನ ಪರಂಪರೆ ಆಧುನಿಕ ಸಂಶೋಧನೆಗೆ ದಿಕ್ಸೂಚಿ:

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮೀನಾ ಚಂದಾವರಕರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಸ್ತುತ ಯುಗದಲ್ಲಿ ನವೀನ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಭಾರತೀಯ ಜ್ಞಾನ ವ್ಯವಸ್ಥೆಯನ್ನು ಆಧುನಿಕ ಶಿಕ್ಷಣದೊಂದಿಗೆ ಸಮನ್ವಯಗೊಳಿಸುವುದು ಅನಿವಾರ್ಯ ಎಂದು ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮೀನಾ ಚಂದಾವರಕರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಹಾಗೂ ವಾಣಿಜ್ಯ ಅಧ್ಯಯನ ವಿಭಾಗದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಐಸಿಎಸ್‌ಎಸ್‌ಆರ್ ಪ್ರಾಯೋಜಿತ ೧೦ ದಿನಗಳ ಸಂಶೋಧನಾ ವಿಧಾನಶಾಸ್ತ್ರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಿಕ್ಸೂಚಿ ಭಾಷಣ ಮಾಡಿದ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಪ್ರಕಾಶ್ ಎಸ್. ಕಾಂಬಳೆ ಮಾತನಾಡಿ, ವಿಕಸಿತ ಭಾರತ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ಎದುರಾಗುವ ಪ್ರಮುಖ ಸವಾಲುಗಳನ್ನು ವಿವರಿಸಿದರು. ಸಂಶೋಧಕರು ದತ್ತಾಂಶ ಆಧಾರಿತ ಹಾಗೂ ಅಂತರಶಿಸ್ತೀಯ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ಹತ್ತು ದಿನಗಳ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು ಸಂಶೋಧನೆಯ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಹಾಗೂ ಡೀನ್ ಪ್ರೊ.ಅನಿತಾ ಆರ್. ನಾಟೇಕರ್, ವಿಶ್ವವಿದ್ಯಾನಿಲಯದ ವಿವಿಧ ಅಧಿಕಾರಿಗಳು, ಗಣ್ಯರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದ ನಿರ್ದೇಶಕ ಡಾ.ಸಿ.ಎಂ. ಮಠಪತಿ ಸ್ವಾಗತಿಸಿದರು. ಸಹ- ನಿರ್ದೇಶಕ ಡಾ.ಗಣೇಶ ಎಸ್.ಆರ್. ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ದಾನೇಶ್ವರಿ ಹಿರೇಮಠ, ಅಶ್ವಿನಿ ತೊರವಿ ಹಾಗೂ ಶಿಫಾ ಮುಶ್ರೀಫ್ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಪಡಿತರ ಆಹಾರ ಧಾನ್ಯ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಹೊರಗುಳಿಯದಂತೆ ಮತಪಟ್ಟಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.