ವಿವಿಧ ಇಲಾಖಾಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ ೩೦ರಿಂದ ಅತ್ಯಂತ ಭರದಿಂದ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಪಾರದರ್ಶಕವಾಗಿ ಕೈಗೊಂಡು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕೇಸ್ವಾನ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖಾಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಗಸ್ಟ್ ೪ರವರೆಗೆ ಜಿಲ್ಲೆಯಲ್ಲಿ ಒಟ್ಟು ೧೬,೭೯,೪೯೫ ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಆನ್‌ಲೈನ್ ಮೂಲಕ ೪,೦೬೯ ಮತದಾರರು ನಮೂನೆ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ೧,೫೨,೮೫೯ ಶಾಶ್ವತವಾಗಿ ಸ್ಥಳಾಂತರಗೊಂಡವರನ್ನು, ೫೪,೫೪೯ ಮೃತಪಟ್ಟವರನ್ನು ಹಾಗೂ ೬೩,೬೦೨ ಗೈರುಹಾಜರಾದ ಅಥವಾ ಸಂಗ್ರಹಿಸಲಾಗದ ಮತದಾರರನ್ನು ಗುರುತಿಸಲಾಗಿದ್ದು, ೨೯,೬೨೩ ಹೊಸ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಮುದ್ದೇಬಿಹಾಳ, ದೇವರ ಹಿಪ್ಪರಗಿ, ಬಸವನ ಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಎಲ್‌ಒಗಳಿಂದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ಗೈರುಹಾಜರ, ವಲಸೆ, ಮರಣ, ಡುಪ್ಲಿಕೇಟ್ ಮತ್ತು ಇತರೆ (ಂSಆಆಔ) ಮತದಾರರ ಮಾಹಿತಿಯನ್ನು ಪ್ರತಿದಿನ ಜಿಲ್ಲೆಯ ಅಧಿಕೃತ ವೆಬ್‌ಸೈಟ್ hಣಣಠಿs://viರಿಚಿಥಿಚಿಠಿuಡಿಚಿ.ಟಿiಛಿ.iಟಿ ಹಾಗೂ ಪತ್ರಿಕಾ ಪ್ರಕಟಣೆಯ ಗೂಗಲ್ ಲಿಂಕ್‌ಗಳ ಮೂಲಕ ಪ್ರಚುರಪಡಿಸಲಾಗುತ್ತಿದೆ. ಈಗಾಗಲೇ ಗುರುತಿಸಲಾದ ಎಸ್‌ಡಿಡಿಒ ಪಟ್ಟಿಯನ್ನು ಒಂಬತ್ತು ಸೆಟ್‌ಗಳಲ್ಲಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ, ಗ್ರಾಮ ಪಂಚಾಯತಿ, ತಹಶೀಲ್ದಾರ್ ಹಾಗೂ ತಾಲೂಕು ಕಚೇರಿಗಳ ಪ್ರಕಟಣಾ ಫಲಕಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗುವುದು. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಈ ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಅನುಮಾನಗಳಿದ್ದರೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದ್ದು, ಅಧಿಕಾರಿಗಳು ಮರು ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ.
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ (ಅಟಚಿims ಚಿಟಿಜ ಔbರಿeಛಿಣioಟಿs) ಆಗಸ್ಟ್ ೧೭ ರಿಂದ ಸೆಪ್ಟೆಂಬರ್ ೧೬, ೨೦೨೬ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಹ ಮತದಾರರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನಮೂನೆ-೬ ಭರ್ತಿ ಮಾಡಿ ಅಂತಿಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಳ್ಳಬಹುದು. ಅಲ್ಲದೆ, ಮುಂಬರುವ ಅಕ್ಟೋಬರ್ ೧, ೨೦೨೬ಕ್ಕೆ ೧೮ ವರ್ಷ ತುಂಬುವ ಯುವ ಮತದಾರರು ಸಹ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ.
ನೀಡಲಾಗಿರುವ ಚುನಾವಣಾ ನೋಟೀಸ್ ಒಂದು ತಿಳುವಳಿಕೆ ಪತ್ರವಾಗಿದ್ದು, ಮತದಾರರು ಗಣತಿ ನಮೂನೆಯ ಹಿಂಬದಿಯಲ್ಲಿ ಸೂಚಿಸಲಾದ ಯಾವುದಾದರೂ ಒಂದು ಅಗತ್ಯ ದಾಖಲೆಯನ್ನು ನೀಡಿ ತಮ್ಮ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಈ ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ತಹಶೀಲ್ದಾರ್ ಪ್ರಶಾಂತ ಚನಗೊಂಡ, ಚುನಾವಣಾ ತಹಶೀಲ್ದಾರ್ ಪವಾರ, ಸಚ್ಚಿದಾನಂದ ತೇರದಾಳ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

