Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

₹5 ಲಕ್ಷ ಶೂನ್ಯ ಬಡ್ಡಿ ಸಾಲ ಘೋಷಣೆ ಕಾಗದದಲ್ಲೇ | ಎಕರೆಗೆ ₹1 ಲಕ್ಷ ಸಾಲ ನೀಡಲು ರೈತರ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆ, (ಜಮಖಂಡಿ): ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದರೂ, ಬ್ಯಾಂಕ್‌ಗಳಲ್ಲಿ ಕೇವಲ ₹40 ಸಾವಿರದಿಂದ ₹50 ಸಾವಿರದವರೆಗೆ ಮಾತ್ರ ಸಾಲ ವಿತರಿಸಲಾಗುತ್ತಿದೆ. ಸರ್ಕಾರದ ಘೋಷಣೆ ಮತ್ತು ಬ್ಯಾಂಕ್‌ಗಳ ಅನುಷ್ಠಾನದ ನಡುವಿನ ತೀವ್ರ ವ್ಯತ್ಯಾಸದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿ ಎಕರೆಗೆ ಕನಿಷ್ಠ ₹1 ಲಕ್ಷವನ್ನು ಶೂನ್ಯ ಬಡ್ಡಿದರದಲ್ಲಿ ಸಾಲವಾಗಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ರೈತರು ಒತ್ತಾಯಿಸಿದರು.
ಈ ಬೇಡಿಕೆಯನ್ನು ಮುಂದಿಟ್ಟುಕೊಂಡು ಜಮಖಂಡಿಯ ಡಿಸಿಸಿ ಬ್ಯಾಂಕ್ ಎದುರು ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡ ಚುನಪ್ಪ ಪೂಜಾರಿ, ಕೃಷಿ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ಎಕರೆ ಈರುಳ್ಳಿ ಬೆಳೆಯಲು ಸುಮಾರು ₹1 ಲಕ್ಷ ವೆಚ್ಚವಾಗುತ್ತಿದೆ. ಕಬ್ಬು ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳಿಗೂ ಲಕ್ಷಾಂತರ ರೂಪಾಯಿ ಬಂಡವಾಳ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ₹40 ಸಾವಿರ ಅಥವಾ ₹50 ಸಾವಿರ ಸಾಲದಿಂದ ಕೃಷಿ ನಡೆಸುವುದು ಸಾಧ್ಯವೇ ಇಲ್ಲ ಎಂದು ಸರ್ಕಾರ ಮತ್ತು ಬ್ಯಾಂಕ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯ ಸರ್ಕಾರ ಬಜೆಟ್‌ನಲ್ಲಿ ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಅದಕ್ಕೆ ಅನುಗುಣವಾಗಿ ಬ್ಯಾಂಕ್‌ಗಳಿಗೆ ಅಗತ್ಯ ಹಣಕಾಸು ವ್ಯವಸ್ಥೆ ಕಲ್ಪಿಸದಿದ್ದರೆ ಆ ಘೋಷಣೆ ಕೇವಲ ಭರವಸೆಯಾಗಿಯೇ ಉಳಿಯುತ್ತದೆ. ರೈತರನ್ನು ದಾರಿ ತಪ್ಪಿಸುವ ಘೋಷಣೆಗಳ ಬದಲಿಗೆ ನೈಜ ಅನುಷ್ಠಾನಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡ್ಡಿಯ ಹೊಣೆ ಹೊತ್ತು, ನಬಾರ್ಡ್ ಹಾಗೂ ಆರ್‌ಬಿಐ ಜತೆ ಸಮನ್ವಯ ಸಾಧಿಸಿ ರೈತರಿಗೆ ಎಕರೆಗೆ ₹1 ಲಕ್ಷದಂತೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಶಾಶ್ವತ ನೀತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರೈತರ ಭೂಮಿಯ ವಿಸ್ತೀರ್ಣಕ್ಕನುಗುಣವಾಗಿ ಸಾಲ ಮಂಜೂರಾಗಬೇಕು. ಕೃಷಿಗೆ ಬೇಕಾದ ನೈಜ ಬಂಡವಾಳದ ಆಧಾರದ ಮೇಲೆ ಸಾಲ ವಿತರಿಸಿದಾಗ ಮಾತ್ರ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯ. ಸರ್ಕಾರ ಘೋಷಿಸಿರುವ ಸೌಲಭ್ಯಗಳು ಕೇವಲ ದಾಖಲೆಗಳಲ್ಲಿ ಉಳಿಯದೇ ನೇರವಾಗಿ ರೈತರ ಕೈ ಸೇರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರೈತ ಮುಖಂಡರಾದ ರಾಜು ನದಾಪ, ಯಲ್ಲಪ್ಪ ಹೆಗಡೆ ಮಾತನಾಡಿದರು.
ಪ್ರತಿಭಟನೆಯಲ್ಲಿ ಸುಶೀಲಕುಮಾರ ಬೆಳಗಲಿ, ಶ್ರೀಶೈಲ ಭೂಮಾರ, ಸಿ.ಎಸ್. ಸುತಾರ, ಕಲ್ಲಪ್ಪ ಬಿರಾದಾರ, ಗೂಡುಸಾಬ ಹೊನವಾಡ, ಸಿದ್ದಪ್ಪ ಬನಜನವರ, ಪ್ರಸನ್ನ ಜಮಖಂಡಿ, ಬಾಹುಬಲಿ ನ್ಯಾಮಗೌಡ, ಪರಸು ಸಾಠ, ಧರೆಪ್ಪ ದಾನಗೌಡ, ಸುರೇಶ ಹಂಚಿನಾಳ, ಸಿದ್ದನಗೌಡ ಪಾಟೀಲ, ಸಿದ್ದಪ್ಪ ಬಳಗನ್ನವರ, ಶಿವಾಜಿ ಕದಂ, ಶ್ರೀಶೈಲ ಮೈಗೂರ, ಚಿದಾನಂದ ಬಿರಾದಾರ, ಗುರಯ್ಯ ಪೂಜಾರಿ ಸೇರಿದಂತೆ ಅನೇಕ ರೈತರು ಭಾಗವಹಿಸಿ ಸರ್ಕಾರ ಹಾಗೂ ಬ್ಯಾಂಕ್ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.