Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!

ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ

ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಶೈಲಗೌಡ ಕರೆ
(ರಾಜ್ಯ ) ಜಿಲ್ಲೆ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಶೈಲಗೌಡ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ನಶೆ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರತಿಯೊಬ್ಬರೂ ನಶೆ ಮುಕ್ತ ಜೀವನದ ಸಂಕಲ್ಪ ಕೈಗೊಂಡು, ಇತರರಲ್ಲೂ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಬೇಕು. ಮಿಷನ್ ಸ್ಪಂದನ ಹಾಗೂ ನಶೆ ಮುಕ್ತ ಭಾರತ ಅಭಿಯಾನದಡಿ ದೇಶದ ೧೦ಕೋಟಿ ಜನರನ್ನು ವ್ಯಸನಮುಕ್ತರನ್ನಾಗಿಸುವ ಬ್ರಹ್ಮಕುಮಾರಿ ಸಂಸ್ಥೆಯ ಮಹಾ ಸಂಕಲ್ಪ ಶ್ಲಾಘನೀಯವಾಗಿದ್ದು, ಇಂತಹ ಜನಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಬದಲಾವಣೆ ತರಲಿವೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಸಿಂದಗಿ ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಪೂಜ್ಯ ದಾದಿ ಪ್ರಕಾಶಮಣಿ ಜೀ ಅವರ ಪವಿತ್ರ ಸ್ಮರಣಾರ್ಥ ಆಯೋಜಿಸಿದ ನಶೆ ಮುಕ್ತ ಭಾರತ ಅಭಿಯಾನದಲ್ಲಿ ವಿಕಸಿತ ಭಾರತದತ್ತ ಒಂದು ಸಬಲವಾದ ಹೆಜ್ಜೆ ೧೦ಕೋಟಿ ನಶೆ ಮುಕ್ತರ ಪ್ರತಿಜ್ಞೆಗಳ ಮಹಾ ಅಭಿಯಾನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಶೆ ಮುಕ್ತ ಸಮಾಜವೇ ಆರೋಗ್ಯವಂತ, ಸುಶಿಕ್ಷಿತ ಮತ್ತು ಸಂಸ್ಕಾರಯುತ ರಾಷ್ಟ್ರದ ಭದ್ರ ಅಡಿಪಾಯವಾಗಿದೆ. ಯುವಜನತೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಕುಟುಂಬ, ಸಮಾಜ ಹಾಗೂ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಈ ವೇಳೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನ ಅಶೋಕ ಮನಗೂಳಿ ಮಾತನಾಡಿ, ಯುವಕರು ವ್ಯಸನ ಮತ್ತು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಪೋಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ವ್ಯಸನಮುಕ್ತ ಹಾಗೂ ವಿದ್ಯಾವಂತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸ್ವಸ್ಥ ಸಮಾಜ, ಸಮರ್ಥ ಭಾರತ ಎಂಬ ಧ್ಯೇಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯ ಸದಸ್ಯರು, ಗಣ್ಯರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ನಶೆ ಮುಕ್ತ ಜೀವನದ ಪ್ರತಿಜ್ಞೆ ಸ್ವೀಕರಿಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ಓಂ ಶಾಂತಿಯ ಪವಿತ್ರಾ ಅಕ್ಕಾಜಿ ವಹಿಸಿದ್ದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಂಕರರಾವ್ ದೇಶಮುಖ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!

ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ

ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ

ಕನಸುಗಳ ಕಣಜ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!
    In (ರಾಜ್ಯ ) ಜಿಲ್ಲೆ
  • ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ
    In (ರಾಜ್ಯ ) ಜಿಲ್ಲೆ
  • ಕನಸುಗಳ ಕಣಜ
    In ಭಾವರಶ್ಮಿ, ವಿಶೇಷ ಲೇಖನ
  • ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಗೌರವ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಶೈಲಗೌಡ ಕರೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮನೆಯಲ್ಲಿ ವಿಜ್ಞಾನ
    In ವಿಶೇಷ ಲೇಖನ
  • ಬ್ರಾಹ್ಮಣರಿಗೆ ಸಚಿವ ಸ್ಥಾನ ನೀಡಲು ಗುಂಡು ಕುಲಕರ್ಣಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 07, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.