Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ
(ರಾಜ್ಯ ) ಜಿಲ್ಲೆ

ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪರ್ಯಾಯ ವ್ಯವಸ್ಥೆಗೆ ಬೀದಿಬದಿ ವ್ಯಾಪಾರಿಗಳ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಸುಪ್ರೀಕೋರ್ಟ್ ಆದೇಶವನ್ನು ನಾವು ಉಲ್ಲಂಘಿಸಿಲ್ಲ. ಫುಟ್ಪಾತ್ ತೆರವಿಗೆ ನಾವು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬಡವರಿಗೊಂದು, ಉಳ್ಳವರಿಗೊಂದು ಆದೇಶ ತರಬೇಡಿ. ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಪ್ರಭಾವಿಗಳು ೩೪ ಕುಂಟೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದಾರೆ. ಮೊದಲು ಅದನ್ನು ತೆರವು ಮಾಡಿಸಿ, ಆ ಜಾಗದಲ್ಲಿ ನಮಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ಮುಂಭಾಗ ಶ್ರೀ ಚಿಕ್ಕದೇವಮ್ಮ ಬೀದಿಬದಿ ವ್ಯಾಪಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಜಮಾಯಿಸಿದ ಬೀದಿಬದಿ ವ್ಯಾಪಾರಿಗಳು, ರಸ್ತೆ ಬದಿ ಯಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದೆವು. ಅದನ್ನೇ ನಂಬಿಕೊಂಡು ಫೈನಾನ್ಸ್ ಕಂಪನಿಗಳಿಂದ ಸಾಲ ತೆಗೆದುಕೊಂಡು ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಕುಟುಂಬ ನಿರ್ವಣೆ ಮಾಡುತ್ತಿದ್ದೆವು. ಆದರೆ ಇದೀಗ ಏಕಾಏಕಿ ಫುಟ್ಪಾತ್ ತೆರವು ಮಾಡಿರುವುದರಿಂದ ನಮಗೆ ದಿಕ್ಕೇ ತೋಚದಂತಾಗಿದೆ. ಅಂಗಡಿಗಳನ್ನು ತೆರವು ಮಾಡಿ ೧೧ ದಿನಗಳು ಕಳೆಯುತ್ತಾ ಬಂದರೂ ಇಲ್ಲಿಯವರೆಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ವ್ಯಾಪಾರ ಮಾಡಲು ನಮಗೆ ಸ್ಥಳ ನಿಗದಿಪಡಿಸಿಲ್ಲ. ಇದರಿಂದ ಜೀವನ ನಡೆಸುವುದೇ ಕಷ್ಟಕರವಾಗಿದೆ ಬೀದಿ ಬದಿ ವ್ಯಾಪಾರಿಗಳ ಸಂಘದ ತಾಲೂಕು ಅಧ್ಯಕ್ಷ ಲಕ್ಷ್ಮಣ ಚಾರಿ ತಮ್ಮ ಅಳಲನ್ನು ತೋಡಿಕೊಂಡರು.
ಬೀದಿಬದಿ ವ್ಯಾಪಾರಿ ಲೋಹಿತ್ ಕುಮಾರ್ ಮಾತನಾಡಿ, ಹೆಚ್ ಡಿ ಕೋಟೆ- ಮಾನಂದವಾಡಿ ರಸ್ತೆಗೆ ಹೊಂದಿಕೊಂಡಿರುವ ಯರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 36 ಗುಂಟೆ ಗುಂಡುತೋಪು ಸರ್ಕಾರಿ ಜಮೀನಿದ್ದು, ಇದು ಉಳ್ಳವರ ಪಾಲಾಗಿದೆ. ಅದೆಷ್ಟೋ ವರ್ಷಗಳಿಂದ ಆ ಜಾಗವನ್ನು ಬಿಟ್ಟುಕೊಡದೆ ಅಲ್ಲೇ ವಾಣಿಜ್ಯ ಚಟುವಟಿಕೆ ನಡೆಸುತ್ತಾ ಬರುತ್ತಿದ್ದಾರೆ. ಮೊದಲು ಇಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡ ತೆರವುಗೊಳಿಸಿ, ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಕಟ್ಟಡ ನಿರ್ಮಾಣ ಮಾಡಿಕೊಡುವ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಶ್ರೀ ಚಿಕ್ಕದೇವಮ್ಮ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಲಕ್ಷ್ಮಣಾಚಾರಿ, ಕಾರ್ಯದರ್ಶಿ ಉಮೇಶ್, ಉಪಾಧ್ಯಕ್ಷೆ ನಾಗಮ್ಮ, ಖಜಾಂಚಿ ಶಿವಣ್ಣ, ಗೌರವ ಅಧ್ಯಕ್ಷ ಗೋಪಾಲ, ಕೇಶವ, ಲೋಹಿತ್ ಕುಮಾರ್ ವೈ ಬಿ. ಹೂ ಸ್ವಾಮಿ, ಮಾಯಮ್ಮ, ಪುಷ್ಪ, ರತ್ನಮ್ಮ, ಪುಷ್ಪ, ಪಾನಿಪುರಿ ಕುಮಾರ, ಬಸವರಾಜು ಗೋಬಿ, ಸುಂದರ್ ಗೋಬಿ, ವಾಟರ್ ಉಮೇಶ್, ಸುರೇಶ, ಜಯಪ್ರಕಾಶ್, ರಮೇಶ್, ಶಾಮಿಯಾನ ಮಲ್ಲಿಕಾರ್ಜುನ, ಹೆಚ್.ಪಿ ಲೋಕೇಶ್, ಪ್ರತಾಪ್, ಹೆಗ್ಗನೂರು ನಿಂಗರಾಜು, ಜೀವಿಕ ಬಸವರಾಜು, ಅನುಷಾ ಸೇರಿದಂತೆ ಅನೇಕ ಮಂದಿ ವ್ಯಾಪಾರಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.