ಉದಯರಶ್ಮಿ ದಿನಪತ್ರಿಕೆ
ಎಚ್ ಡಿ ಕೋಟೆ: 8 ಆಗಸ್ಟ್ 2026 ರಂದು ಹೆಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಮಾದಾರ ಮಹಾಸಭಾ ತಾಲೂಕು ಘಟಕಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸರಗೂರು ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲೂಕು ಮಹಾಸಭಾದ ಅಧ್ಯಕ್ಷರಾದ ಪರಶಿವಮೂರ್ತಿ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಶಿವಮೂರ್ತಿ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ, ಹೆಚ್ ಡಿ ಕೋಟೆ ಕ್ಷೇತ್ರ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ, ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾಸ್ತಮ್ಮ ದೇವಸ್ಥಾನದಿಂದ ವೇದಿಕೆ ಕಾರ್ಯಕ್ರಮದವರೆಗೆ ಸಾಗಲಿರುವ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಅವರು ಮಾದಾರ ಮಹಾಸಭಾ ಸಂಘ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಸರಗೂರು ತಾಲೂಕು ಅಧ್ಯಕ್ಷ ಬೆಟ್ಟಸ್ವಾಮಿ ಮಾತನಾಡಿ, ಅವಳಿ ತಾಲೂಕಿನ ಮಾದಾರ ಮಹಾಸಭಾ ವತಿಯಿಂದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಸಾಧಕರಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿ ರಮೇಶ್, ಧರ್ಮಸೇನಾ ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಎರಡು ತಾಲೂಕಿನ ಸಮಾಜದ ಗಡಿಯಜಮಾನರು, ಮುಖಂಡರು, ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಡಾ. ಬಾಬು ಜಗಜೀವನ್ ವಿಚಾರ ವೇದಿಕೆ ಮಾಜಿ ಅಧ್ಯಕ್ಷ ನಾಗರಾಜು, ತಾಲೂಕು ಮಾದಾರ ಮಹಾಸಭಾದ ಅಧ್ಯಕ್ಷರಾದ ಬೆಟ್ಟಸ್ವಾಮಿ, ಉಪಾಧ್ಯಕ್ಷರಾದ ಉಡನಾಗರಾಜು, ಶಿವರಾಜು, ಪ್ರಧಾನ ಕಾರ್ಯದರ್ಶಿ ಚೆಲುವರಾಜು, ನಿರ್ದೇಶಕರಾದ ಶಿವಯ್ಯ ಉಪಸ್ಥಿತರಿದ್ದರು.

