Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಸೌಂದರ್ಯೀಕರಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ-ಪಾಲಿಕೆ ನಿರ್ಧಾರ
(ರಾಜ್ಯ ) ಜಿಲ್ಲೆ

ನಗರ ಸೌಂದರ್ಯೀಕರಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ-ಪಾಲಿಕೆ ನಿರ್ಧಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ನಗರದ ಕೋಟೆಗೋಡೆ ಸುತ್ತಮುತ್ತ ಮಳೆ ನೀರು ಹರಿವಿಗೆ ಅಡೆತಡೆ ತೆರವು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಶಿವಾಜಿ ಸರ್ಕಲ್‌ನಿಂದ ಲಿಂಗದಗುಡಿ ರಸ್ತೆ ಹಾಗೂ ಗಚ್ಚಿನ ಕಟ್ಟಿ ಕಾಲೋನಿಗೆ ಹೊಂದಿಕೊಂಡಿರುವ ಕೋಟೆಗೋಡೆ ಸುತ್ತಲೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಮತ್ತು ಪ್ರವಾಹ ಉಂಟಾಗದಂತೆ ತಡೆಯಲು ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ನಿರ್ಧರಿಸಲಾಗಿದೆ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಪಾಲಿಕೆ ಆಯುಕ್ತರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ತಿಳಿಸಿದ ಅವರು, ಕೋಟೆಗಳ ಸುತ್ತಮುತ್ತಲೂ ಬೆಳೆದಿರುವ ಕಂಟಿ ಬೇಲಿ ಹಾಗೂ ಗಿಡ-ಗಂಟಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಉಭಯ ಅಧಿಕಾರಿಗಳು ತೀರ್ಮಾನಿಸಿದರು.
ಜೊತೆಗೆ ಕೋಟೆ ಕಂದಕದ ಸುತ್ತಮುತ್ತ ಹೂಳೆತ್ತಿ, ನೀರಿನ ಹರಿವಿಗೆ ಅನುಕೂಲವಾಗುವಂತೆ ಅಗಲೀಕರಣಗೊಳಿಸಲು ನಿರ್ಧರಿಸಿದರು.
ನೀರು ಸುಗಮವಾಗಿ ಹರಿಯಲು ತಡೆಗೋಡೆ ನಿರ್ಮಾಣ ಮತ್ತು ಮಾರ್ಗ ಮಧ್ಯೆದಲ್ಲಿರುವ ಅಡೆತಡೆಗಳನ್ನು ತೆರವುಗೊಳಿಸಲು ಸಭೆ ನಿರ್ಧರಿಸಿತು.
ಶಾಶ್ವತ ಪರಿಹಾರ:
ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಮಳೆಗಾಲದಲ್ಲಿ ನಗರದಲ್ಲಿ ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಗಾಂಧಿ ವೃತ್ತದ ಮರು ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆಯಿಂದ ಬೇಗಂ ತಲಾಬ್ ಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ಕೆರೆಯ ಬಂಡ್ ಕನೆಕ್ಟಿಂಗ್ ಕಾಮಗಾರಿ ಕೈಗೊಳ್ಳಲು ಹಾಗೂ ಮಹಾಬಲೇಶ್ವರ ನಗರ ಉದ್ಯಾನವನದ ಅಭಿವೃದ್ಧಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.