ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಮತ್ತು ಶಿಕ್ಷಕರ ನೇಮಕಾತಿ ಅಧಿಸೂಚನೆಗೆ ವಿರೋಧ | ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾಧಿಕಾರಿಗೆ ಮನವಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಮತ್ತು ಶಿಕ್ಷಕರ ನೇಮಕಾತಿ ಅಧಿಸೂಚನೆ ವಿರೋಧಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ನೋಂ) ವಿಜಯಪುರ ಜಿಲ್ಲಾ ಸಮಿತಿಯಿಂದ ಶುಕ್ರವಾರ ದಿನಾಂಕ 7 ಅಗಸ್ಟ್ ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಭಾಸಾಪ ಸಹ ಕಾರ್ಯದರ್ಶಿ ಮಯೂರಕುಮಾರ ತಿಳಗೂಳಕರ ಅವರು, “ಕರ್ನಾಟಕ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಐದನೆಯ ತರಗತಿಯವರೆಗೆ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ವಿವರಿಸಿದರು.
ಈಗ ಶಾಲಾ ಶಿಕ್ಷಣ ಇಲಾಖೆಯು ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ನಿರೀಕ್ಷರ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಅದರಲ್ಲಿ ಕನ್ನಡ ಶಿಕ್ಷಕರ ನೇಮಕಾತಿಯನ್ನೇ ಕೈಬಿಡಲಾಗಿದೆ. ಅಲ್ಲದೆ ವಿಜ್ಞಾನ, ಗಣಿತ ಸೇರಿದಂತೆ ಎಲ್ಲಾ ವಿಷಯಗಳ ಶಿಕ್ಷಕರ ನೇಮಕಾತಿಗೆ ಆಂಗ್ಲಭಾಷಾ ಪ್ರೌಢಿಮೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಅಭಾಸಾಪ ಜಿಲ್ಲಾಧ್ಯಕ್ಷ ವಿವೇಕ ಕುಲಕರ್ಣಿ ಮಾತನಾಡಿ ‘ಸರ್ಕಾರ ದ್ವಿಭಾಷಾ ನೀತಿಯು ಕನ್ನಡ ಭಾಷೆಯ ಉಳಿವಿಗೆ ಮಾರಕವಾಗಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಆನಂದ ಗೋಡ್ಸೆ, ವಿಭಾಗ ಸಂಯೋಜಕ ಶ್ರೀರಂಗ ಪುರಾಣಿಕ, ಕಾರ್ಯದರ್ಶಿ ಸುಕಾಂತ ಕುಲಕರ್ಣಿ, ಸಹ ಕಾರ್ಯದರ್ಶಿ ಅನೀಲ ಬೆಳುಂಡಗಿ, ಸದಸ್ಯರಾದ ಭಾರತಿ ಗೋಡ್ಸೆ ಹಾಗೂ ದಾನೇಶ್ವರಿ ಅಲ್ಲಾಳೆ ಉಪಸ್ಥಿತರಿದ್ದರು.

