ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜಿಲ್ಲೆಯಲ್ಲಿ ಅಗಸ್ಟ್ 9 ಮತ್ತು 10 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ.9 ರವಿವಾರ ಬೆ.9-12ಗಂ. ವರೆಗೆ ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮ.1ಗಂ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಹಂಜಗಿಸಿದ್ಧೇಶ್ವರ, ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಕನಕದಾಸ ಸರ್ಕಲ್ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮ.3ಗಂ. ಹಿರೇಮಠ ಸಹೋದರರು ನಗರದ ರಾಜಕುಮಾರ ಲೇಔಟ್ ನಲ್ಲಿ ನಿರ್ಮಿಸಿದ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ದಿ.10 ಸೋಮವಾರ ಬೆ.9ಗಂ. ಟೋಯೋಟಾ ಕಂಪನಿ ಸಿಎಸ್ಆರ್ ಅನುದಾನದಲ್ಲಿ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಸರ್ಕಾರಿ ಪ್ರೌಢಶಾಲೆ ಹೆಬ್ಬಾಳಟ್ಟಿ ನಾಲ್ಕು ಕೊಠಡಿ, ಮ.12ಗಂ. ಅರ್ಜುಣಗಿ ಕೆ.ಪಿ.ಎಸ್ ಶಾಲಾ ಕಟ್ಟಡ, ಪಿ.ಯು ಕಾಲೇಜ್ 4 ಕೊಠಡಿ ಉದ್ಘಾಟಿಸಲಿದ್ದಾರೆ.
ನಂತರ ಮ.2ಗಂ. ಬೋಳಚಿಕ್ಕಲಕಿ ಸರ್ಕಾರಿ ಪ್ರೌಢಶಾಲೆಯ ನಾಲ್ಕು ಕೊಠಡಿ ಉದ್ಘಾಟಿಸುವರು. ನಂತರ ಮ.3ಗಂ. ಮಮದಾಪುರ ಕೋಕೋ ಕೋಲಾ ಕಂಪನಿ ಸಿ.ಎಸ್.ಆರ್ ಅನುದಾನದಲ್ಲಿ ಮಮದಾಪುರ ಐತಿಹಾಸಿಕ ಕೆರೆ ಅಭಿವೃದ್ಧಿ ಹಾಗೂ ಸೌಂದರ್ಯಿಕರಣಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ನಂತರ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟಿಸಲಿದ್ದಾರೆ ಹಾಗೂ ಟೋಯೋಟಾ ಕಂಪನಿ ಸಿ.ಎಸ್.ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನವಾಗಿ ನಿರ್ಮಿಸಲಾದ ನಾಲ್ಕು ಕೊಠಡಿಗಳನ್ನು ಮತ್ತು ಎರಡು ಕೊಠಡಿಗಳಲ್ಲಿ ವಿಜ್ಞಾನ ಕೇಂದ್ರ ಉದ್ಘಾಟಿಸಲಿದ್ದಾರೆ ಹಾಗೂ ಮಕ್ಕಳ ಆಟಿಕೆ ಸಾಮಗ್ರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

