Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
(ರಾಜ್ಯ ) ಜಿಲ್ಲೆ

ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೈತರ ಹಿತದೃಷ್ಟಿಯಿಂದ ಪಾರದರ್ಶಕ ವಹಿವಾಟಿಗಾಗಿ ಆರಂಭಿಸಲಾದ ಆನ್ ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಆದ್ಯತೆ ಕಲ್ಪಿಸಲು ಈಚೆಗೆ ಸಭೆ ನಡೆಸಿ, ಸೂಚನೆ ನೀಡಿದ ನಂತರ ನಡೆದ ಒಣದ್ರಾಕ್ಷಿ ವಹಿವಾಟಿನಲ್ಲಿ ಈವರೆಗೆ ನಡೆಯುತ್ತಿದ್ದ ಸರಾಸರಿ ರೂ.5 ಕೋಟಿ ಯಿಂದ ರೂ.12 ಕೋಟಿಗೆ ಭಾರಿ ಏರಿಕೆ ಆಗಿರುವುದು ಒಳ್ಳೆಯ ಬೆಳವಣಿಗೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಒಣದ್ರಾಕ್ಷಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆ ಆರಂಭಗೊಂಡರೂ, ಕೆಲ ವ್ಯಕ್ತಿಗಳು ಖಾಸಗಿ ಅಸೋಷಿಯನ್ ರಚಿಸಿ, ಎಪಿಎಂಸಿಗೆ ಸಂಬಂಧವೇ ಇಲ್ಲದಂತೆ ತಮ್ಮದೆಯಾದ ನಿಯಮಾವಳಿಗಳನ್ನು ಮಾಡಿಕೊಂಡು, ಕೆಲವೇ ಕೆಲವು ವ್ಯಕ್ತಿಗಳು ಹರಾಜ್ ದಲ್ಲಿ ಭಾಗವಹಿಸಿ ಮನಸ್ಸಿಗೆ ಬಂದ ದರದಲ್ಲಿ ಖರೀದಿ ಮಾಡಿಕೊಂಡು ರೈತರಿಗೆ ವಂಚನೆ ಮಾಡಲಾಗುತ್ತಿತ್ತು. ಅಲ್ಲದೇ, ತಮ್ಮ ಕೋಲ್ಡ್ ಸ್ಟೋರೇಜ್ ಗಳಲ್ಲಿ ರೈತರು ತಂದಿಡುವ ಉತ್ಪನ್ನಗಳಿಗೆ ಬಾಡಿಗೆ ಪಡೆದುಕೊಳ್ಳುವುದಲ್ಲದೇ, ಮಾರಾಟದ ಬಳಿಕ ಶೇ 2 ರಷ್ಟು ಕಮಿಷನ್ ಸಹ ವಸೂಲಿ ಮಾಡುತ್ತಿದ್ದರು. ಇದರಿಂದ ರೈತರಿಗೆ ಸೂಕ್ತ ಬೆಲೆ ಮತ್ತು ವಿನಾಕಾರಣ ಕಮಿಷನ್ ನೀಡುತ್ತಿದ್ದರಿಂದ ನಷ್ಟ ಉಂಟಾಗುತ್ತಿತ್ತು. ಅಲ್ಲದೇ ತೂಕದಲ್ಲಿಯೂ ವ್ಯತ್ಯಾಸವಾಗುತ್ತಿತ್ತು.
ಇದಕ್ಕೆ ಕಡಿವಾಣ ಹಾಕಲು ಈಚೆಗೆ (ಜುಲೈ 28) ಎಪಿಎಂಸಿ ಪ್ರಾಂಗಣದಲ್ಲಿ ದ್ರಾಕ್ಷಿ ಬೆಳೆಗಾರರು ಹಾಗೂ ಎಪಿಎಂಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಆನ್ ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಆದ್ಯತೆ ನೀಡಲು ಕಡ್ಡಾಯವಾಗಿ ವಾರದಲ್ಲಿ ಎರಡು ಭಾರಿ ಆನಲೈನ್ ಟ್ರೇಡಿಂಗ್ ಮಾರುಕಟ್ಟೆಯಲ್ಲೇ ಒಣದ್ರಾಕ್ಷಿ ವಹಿವಾಟು ನಡೆಸಲು ಸರ್ವಾನುಮತದಿಂದ ತಿರ್ಮಾನಿಸಲಾಗಿತ್ತು.
ಅದಾದ ಬಳಿಕ ಶನಿವಾರ (ಆ.1) ನಡೆದ ಆನಲೈನ್ ಮಾರುಕಟ್ಟೆ ಪ್ರಕ್ರಿಯೆಯಲ್ಲಿ 4,59 ಲಕ್ಷ ಕೆ.ಜಿ ಒಣದ್ರಾಕ್ಷಿ ವಹಿವಾಟು ನಡೆದಿದ್ದು, ಇದಕ್ಕೂ ಮೊದಲೂ ಕೇವಲ 2.17 ಲಕ್ಷ ಕೆ.ಜಿ ವಹಿವಾಟು ದಾಖಲಾಗಿತ್ತು. ದರದಲ್ಲಿಯೂ ಏರಿಕೆ ಕಂಡಿದ್ದು, ಪ್ರತಿ ಕೆ.ಜಿ ಒಣದ್ರಾಕ್ಷಿ ಗರಿಷ್ಠ ರೂ. 390 ವರೆಗೆ ಮಾರಾಟವಾಗಿದೆ. ಈ ಪ್ರಕ್ರಿಯೆಯಲ್ಲಿ ಇಲ್ಲಿಯವರೆಗೆ ಭಾಗವಹಿಸುತ್ತಿದ್ದ ಖರೀದಿದಾರರ ಸಂಖ್ಯೆ 14 ರಿಂದ 25ಕ್ಕೆ ಹೆಚ್ಚಳವಾಗಿದೆ. ದಲ್ಲಾಳಿಗಳ ಸಂಖ್ಯೆ 5 ರಿಂದ 15ಕ್ಕೆ ಅಧಿಕವಾಗಿದೆ. ಈ ಬೆಳವಣಿಗೆಯಿಂದ ರೈತರಿಗೆ ಈವರೆಗೆ ಆಗುತ್ತಿದ್ದ ತೂಕದಲ್ಲಿ ಮೋಸ, ಬೆಲೆಯಲ್ಲಿ ವ್ಯತ್ಯಾಸ, ಆಕ್ಷನ್ ನೆಪದಲ್ಲಿ ತೂರಾಟ ನಡೆಸಿ ಅನಾವಶ್ಯಕವಾಗಿ ಉತ್ಪನ್ನ ಹಾಳಾಗುತ್ತಿರುವುದು ತಪ್ಪಿದಂತಾಗಿದೆ.
ಖಾಸಗಿಯವರು ನಡೆಸುತ್ತಿದ್ದ ಬಹಿರಂಗ ಹರಾಜಿನಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವಹಿವಾಟು ಆಗುತ್ತಿರುವುದರಿಂದ ಯಾವುದೇ ನಿಕರವಾದ ಮಾಹಿತಿಯೂ ದೊರೆಯದೇ, ಸರ್ಕಾರಕ್ಕೆ ಸೆಸ್ ಮತ್ತು ಜಿ.ಎಸ್.ಟಿ ಮೂಲಕ ಬರಬೇಕಿದ್ದ ಆದಾಯ ಸಹ ಕೈ ತಪ್ಪುತ್ತಿತ್ತು. ಈಗ ಆನ್ ಲೈನ್ ಮಾರುಕಟ್ಟೆಯಲ್ಲೇ ಹೆಚ್ಚಿನ ವಹಿವಾಟು ನಡೆಯುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಹರಿದು ಬರಲಿದೆ.
ಎಲ್ಲ ದ್ರಾಕ್ಷಿ ಬೆಳೆಯುವ ರೈತರು ಯಾರ ಲಾಭಿಗೂ ಮಣಿಯದೇ ನಿರಾಂತಕವಾಗಿ ದೊರೆತ ಇಂತಹ ಅವಕಾಶವನ್ನು ಹೆಚ್ಚು ಜನರಿಗೆ ಪ್ರಚುರಪಡಿಸಿ, ಆನಲೈನ್ ಮಾರುಕಟ್ಟೆಯಲ್ಲಿ ಭಾಗವಹಿಸಲು ಪ್ರೇರೆಪಿಸಿದಲ್ಲಿ, ಇಲಾಖೆಗೂ ಆದಾಯ ಮತ್ತು ರೈತರಿಗೂ ಅತೀ ಹೆಚ್ಚು ಲಾಭ ದೊರೆಯಲಿದೆ. ದೇಶದ ಯಾವುದೇ ರಾಜ್ಯದ ವರ್ತಕರು ಆನಲೈನ್ ಮತ್ತು ತಾತ್ಕಾಲಿಕವಾಗಿ ನಡೆಯುವ ಆಪ್ ಲೈನ್ ಮಾರುಕಟ್ಟೆ ವಹಿವಾಟಿನಲ್ಲಿ ಭಾಗವಹಿಸಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.