Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
(ರಾಜ್ಯ ) ಜಿಲ್ಲೆ

ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಾಹನ ಗ್ಯಾರೇಜ್‌ನಲ್ಲಿ ಧೂಳು ಹಿಡಿಯುತ್ತಿದ್ದರೂ ನಿರ್ಲಕ್ಷ್ಯ | ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಗ್ರಾಮದಲ್ಲಿ ನೈರ್ಮಲ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ನೀಡಲಾದ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ನಿರ್ವಹಣೆ (ಕಸದ) ವಾಹನವು ಕಳೆದ ಮೂರು ತಿಂಗಳಿನಿಂದ ಗ್ಯಾರೇಜ್‌ನಲ್ಲಿ ಮೂಲೆ ಸೇರಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗ್ರಹಣ ಹಿಡಿದಂತಾಗಿರುವ
ವಾಹನದ ಬಾಡಿಯು ಸಂಪೂರ್ಣವಾಗಿ ಹಾನಿಗೊಂಡಿದ್ದು, ದುರಸ್ತಿಗಾಗಿ ಖಾಸಗಿ ಗ್ಯಾರೇಜ್‌ಗೆ ನೀಡಲಾಗಿತ್ತು. ಆದರೆ, ಹಣ ಪಾವತಿಸದ ಕಾರಣ ಗ್ಯಾರೇಜ್ ಮಾಲೀಕರು ರಿಪೇರಿ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದು, ಕಳೆದ ಹಲವು ತಿಂಗಳುಗಳಿಂದ ವಾಹನವು ಅನಾಥವಾಗಿ ನಿಂತಿದೆ. ಇದರಿಂದಾಗಿ ಸರ್ಕಾರಿ ಆಸ್ತಿ ಹಾಳಾಗುತ್ತಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಾಹನವು ಜಂಗ್ ಹಿಡಿಯುವ ಸ್ಥಿತಿಗೆ ತಲುಪಿದೆ.
ಈ ಕುರಿತು ಪತ್ರಿಕೆಯು ಅಧಿಕಾರಿಗಳನ್ನು ಪ್ರಶ್ನಿಸಿದಾಗ, ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಯತ್ನ ನಡೆಸಿದ್ದಾರೆ:
ಗ್ರಾಮದಲ್ಲಿ ಕಸ ವಿಲೇವಾರಿ ಸರಿಯಾಗಿ ನಡೆಯದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೆ, ಇತ್ತ ಲಕ್ಷಾಂತರ ರೂಪಾಯಿ ವೆಚ್ಚದ ಸರ್ಕಾರಿ ವಾಹನ ಗ್ಯಾರೇಜ್‌ನಲ್ಲಿ ಧೂಳು ಹಿಡಿಯುತ್ತಿದೆ. ಮೇಲಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ, ವಾಹನವನ್ನು ದುರಸ್ತಿ ಮಾಡಿಸಿ ಗ್ರಾಮದ ನೈರ್ಮಲ್ಯ ಕಾರ್ಯಕ್ಕೆ ಬಳಸಿಕೊಳ್ಳಬೇಕೆಂದು ಮೋರಟಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಾಜಿ ಕಾರ್ಯದರ್ಶಿ ನೀಡಿದ ಸ್ಪಷ್ಟನೆ

ಈ ಬಗ್ಗೆ ಪಂಚಾಯಿತಿಯ ಮಾಜಿ ಮಹಿಳಾ ಕಾರ್ಯದರ್ಶಿಯವರನ್ನು ವಿಚಾರಿಸಿದಾಗ, “ವಾಹನದ ಬಾಡಿ ಹಾಳಾಗಿದ್ದರಿಂದ ಅದನ್ನು ದುರಸ್ತಿಗೆ ನೀಡಲಾಗಿತ್ತು. ಅಡ್ವಾನ್ಸ್ ಹಣ ಕೊಟ್ಟು ರಿಪೇರಿಗೆ ನೀಡಿದ್ದೆವು. ಆದರೆ ವಾಟರ್‌ಮ್ಯಾನ್ ತಂದು ಗ್ಯಾರೇಜ್ ಮುಂದೆ ನಿಲ್ಲಿಸಿದ್ದಾನೆ. ಪ್ರಸ್ತುತ ನಾನು ಬೇರೆ ಪಂಚಾಯಿತಿಗೆ ವರ್ಗಾವಣೆಯಾಗಿದ್ದು, ಪ್ರಭಾರವನ್ನು ನೂತನ ಪಿಡಿಒ ಅವರಿಗೆ ಹಸ್ತಾಂತರಿಸಿದ್ದೇನೆ” ಎಂದು ತಿಳಿಸಿದರು.

ಪೂರ್ಣ ಮಾಹಿತಿ ಇಲ್ಲ :ಪಿಡಿಒ

ಇನ್ನು ಪ್ರಸ್ತುತ ಕರ್ತವ್ಯದಲ್ಲಿರುವ ನೂತನ ಪಿಡಿಒ ಅವರನ್ನು ಸಂಪರ್ಕಿಸಿದಾಗ, “ನಾನು ಈ ಪಂಚಾಯಿತಿಗೆ ಬಂದು ಕೇವಲ ಒಂದು ವಾರವಾಗಿದೆ. ವಾಹನದ ರಿಪೇರಿ ಹಾಗೂ ಅದರ ಸಮಸ್ಯೆಗಳ ಕುರಿತು ಪೂರ್ಣ ಮಾಹಿತಿ ಇಲ್ಲ. ಈ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ” ಎಂದು ಹಾರಿಕೆ ಉತ್ತರ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.