ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ, (ಜಮಖಂಡಿ): ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ನಿಷ್ಠಾವಂತ ಹಾಗೂ ಗಮನಾರ್ಹ ಸೇವೆ, ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಜಮಖಂಡಿ ತಾಲೂಕಿನ ಜಂಬಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಬಾಳಪ್ಪ ಮ. ಮಠೋಳಿ (ಬಿ.ಎಂ. ಮಠೋಳಿ) ಅವರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ಜಮಖಂಡಿ ತಾಲೂಕು ಘಟಕ ಮತ್ತು ವೀರೇಶ್ವರ ಪ್ರಕಾಶನ, ಜಮಖಂಡಿ ಇವರ ಸಹಯೋಗದಲ್ಲಿ ಶಿಕ್ಷಕರ ಶೈಕ್ಷಣಿಕ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಪ್ರಶಸ್ತಿ ಪಡೆದ ಬಿ.ಎಂ. ಮಠೋಳಿ ಅವರನ್ನು ಸಹ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣಾಭಿಮಾನಿಗಳು, ಸ್ನೇಹಿತರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

