Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
(ರಾಜ್ಯ ) ಜಿಲ್ಲೆ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ದಿವ್ಯ ಸಂಜೆ ಕಾರ್ಯಕ್ರಮದಲ್ಲಿ ‘ಇವ ನಮ್ಮವ’ ತತ್ತ್ವದ ಪ್ರತಿಪಾದನೆ | ಸದ್ಗುರು ಶ್ರೀ ಮಧುಸೂದನ ಸಾಯಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: “ಉತ್ತರ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆಯಿಂದಾಗಿ ರಕ್ತಹೀನತೆ, ಕಬ್ಬಿಣಾಂಶದ ಕೊರತೆ ವ್ಯಾಪಕವಾಗಿದೆ. ಇದರಿಂದ ಮಕ್ಕಳ ಎತ್ತರ ಕಡಿಮೆಯಾಗುತ್ತಿದ್ದು, ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ” ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಎಚ್ಚರಿಸಿದರು.
ನಗರದಲ್ಲಿ ಶುಕ್ರವಾರ (ಆಗಸ್ಟ್‌ 7) ನಡೆದ “ದಿವ್ಯ ಸಂಜೆ” ಸಂವಾದ ಕಾರ್ಯಕ್ರಮದಲ್ಲಿ ಬಸವ ಸಮಿತಿ ಅಧ್ಯಕ್ಷ ಡಾ ಅರವಿಂದ ಜತ್ತಿ ಅವರು ಕೇಳಿದ ಪ್ರಶ್ನೆಗಳಿಗೆ ಸದ್ಗುರು ಉತ್ತರಿಸಿದರು.
“ಸಾಯಿಶ್ಯೂರ್ ಮುಂಜಾನೆ ಪೌಷ್ಟಿಕ ಆಹಾರ ಯೋಜನೆ ಆರಂಭಿಸಿದ ನಂತರ ಪರಿಸ್ಥಿತಿಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಕರ್ನಾಟಕದಲ್ಲಿ ಪ್ರತಿದಿನ ಒಟ್ಟು 55 ಲಕ್ಷ ಮಕ್ಕಳಿಗೆ ಸಾಯಿ ಶ್ಯೂರ್ ಪೌಷ್ಟಿಕ ಉಪಾಹಾರ ಸಿಗುತ್ತಿದೆ. ವಿಜಯಪುರ ಜಿಲ್ಲೆಯ 3 ಲಕ್ಷ ಮಕ್ಕಳು ಇದರ ಫಲಾನುಭವಿಗಳಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ವರ್ಷಕ್ಕೆ 100 ಕೋಟಿ ಖರ್ಚು ಬರುತ್ತಿದೆ. ಅದರಲ್ಲಿ ಸರ್ಕಾರವು 25 ಕೋಟಿ ರೂಪಾಯಿ ಅನುದಾನ ನೀಡುತ್ತಿದೆ” ಎಂದು ಸದ್ಗುರುಗಳು ವಿವರಿಸಿದರು.
ಉತ್ತರ ಕರ್ನಾಟಕದಲ್ಲಿ ಬಡತನವಿದೆ. ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡತನದ ಕಾರಣಕ್ಕೆ ತಾಯಂದಿರು ಜೀವ ಕಳೆದುಕೊಂಡಿದ್ದಾರೆ. ಮಕ್ಕಳು ಅನಾಥವಾಗುತ್ತಿದ್ದಾರೆ. ಇಂಥವರನ್ನು ನೋಡಿದಾಗ ಬೇಸರವಾಗುತ್ತೆ ಎಂದು ಸದ್ಗುರು ವಿಷಾದ ವ್ಯಕ್ತಪಡಿಸಿದರು.
ಇಷ್ಟು ಮಾಡಿದ್ದೇವೆ ಎನ್ನುವ ತೃಪ್ತಿ ಖಂಡಿತ ನನಗೆ ಇಲ್ಲ. ಇಲ್ಲಿ ಮಾಡಬೇಕಾದ್ದು ಇನ್ನೂ ಸಾಕಷ್ಟಿದೆ. ನಮಗೆ ಸರ್ಕಾರ, ಸಮಾಜದ ಸ್ಪಂದನೆ ಚೆನ್ನಾಗಿದೆ. ಸ್ಥಳೀಯ ಜನಪ್ರತಿನಿಧಿಗಳೂ ಕೈಜೋಡಿಸುತ್ತಿದ್ದಾರೆ ಎಂದು ವಿವರಿಸಿದರು.
“ಕರ್ನಾಟಕ ರಾಜ್ಯದ ಯಾರೊಬ್ಬರೂ ಛತ್ತಿಸ್‌ಗಡದ ನನ್ನನ್ನು ‘ಇವನಾರವ’ ಎಂದು ದೂರ ತಳ್ಳಲಿಲ್ಲ. ಬದಲಾಗಿ ‘ಇವ ನಮ್ಮವ’ ಎಂದು ಸ್ವೀಕರಿಸಿದರು. ಇದು ಶರಣರ ನಾಡು. ಇಲ್ಲಿ ಅಧ್ಯಾತ್ಮ ಚಿಂತನೆಗಳು ವ್ಯಾಪಿಸಿದೆ. ಬಸವಣ್ಣನಂತಹ ಚಿಂತಕರು ಬೇರೆ ದೇಶಗಳಲ್ಲಿ ಹುಟ್ಟಲಿಲ್ಲ. ಹೀಗಾಗಿ ಬೇರೆ ದೇಶದವರಿಗೆ ತಮ್ಮ ಸಮುದಾಯ, ದೇಶದ ಚೌಕಟ್ಟು ಮೀರಿ ಯೋಚಿಸುವುದು ಕಷ್ಟ” ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಇಂಡಿ ತಾಲ್ಲೂಕಿನಲ್ಲಿರುವ “ಶ್ರೀ ಸತ್ಯ ಸಾಯಿ ಪ್ರೇಮ ನಿಕೇತನಂ” ಗುರುಕುಲದ ವಿದ್ಯಾರ್ಥಿಗಳಿಂದ ವೇದಮಂತ್ರಗಳ ಪಾರಾಯಣದಿಂದ ಆರಂಭವಾಯಿತು. ಕಾರ್ಯಕ್ರಮದ ಕೊನೆಯಲ್ಲಿ “ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ”ದ ವಿದ್ಯಾರ್ಥಿನಿಯರು ಅತ್ಯಾಕರ್ಷಕ ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ, ಶಿರಶ್ಯಾಡ ಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಸೋಮನಗೌಡ ಸಾಸನೂರ, ಚಾಣಾಕ್ಷ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ, ಎಕ್ಸಲೆಂಟ್ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ, ಲಿಂಗಾಯತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ನಾಗಠಾಣ, ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವೈದ್ಯರು, ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ತಜ್ಞರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ನಿಸ್ವಾರ್ಥ ಪ್ರೇಮದ ಶಕ್ತಿಗೆ ಜೀವಂತ ಉದಾಹರಣೆ: ನರಸಿಂಹಮೂರ್ತಿ:
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷರಾದ ಡಾ.ಎನ್.ನರಸಿಂಹಮೂರ್ತಿ, ”ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ, ಕೋಟ್ಯಂತರ ಮಕ್ಕಳಿಗೆ ಉಚಿತ ಪೌಷ್ಟಿಕ ಆಹಾರ, ಲಕ್ಷಾಂತರ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸಿದ್ದಾರೆ” ಎಂದು ಹೇಳಿದರು.
“ಭಾರತದ ಶೇ 70 ಕ್ಕಿಂತ ಹೆಚ್ಚಿನ ಜನರು ಹಳ್ಳಿಗಳಲ್ಲಿದ್ದಾರೆ. ಆದರೆ ಶೇ 80 ಕ್ಕಿಂತ ಹೆಚ್ಚು ವೈದ್ಯಕೀಯ ಕೇಂದ್ರಗಳು ನಗರಗಳಲ್ಲಿವೆ. ಆರೋಗ್ಯ ಸೇವಾ ಕ್ಷೇತ್ರದಲ್ಲಿರುವ ಈ ಅಂತರವನ್ನು ಕಡಿಮೆ ಮಾಡಬೇಕು ಎನ್ನುವ ಉದ್ದೇಶದಿಂದ ಸದ್ಗುರುಗಳು ಭಾರತದ ಮೊದಲ ಖಾಸಗಿ ಸಂಪೂರ್ಣ ಉಚಿತ ವೈದ್ಯಕೀಯ ಕಾಲೇಜು ಆರಂಭಿದರು” ಎಂದು ವಿವರಿಸಿದರು.

ಅಂಜುಟಗಿಯಲ್ಲಿ ಗೋಲ್‌ಗುಂಬಜ್‌ಗಿಂತಲೂ ದೊಡ್ಡ ಸಭಾಭವನ, ಸಾಯಿಸ್ವಾಸ್ಥ್ಯ ಕೇಂದ್ರ
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಅಭಿವೃದ್ಧಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸದ್ಗುರು ಶ್ರೀ ಮಧುಸೂದನ ಸಾಯಿ, “ಪ್ರಸ್ತುತ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಗದಗ, ವಿಜಯನಗರ ಜಿಲ್ಲೆಗಳಲ್ಲಿ ನಮ್ಮ ವಿದ್ಯಾಸಂಸ್ಥೆಗಳಿವೆ. ವಿಜಯಪುರದ ಇಂಡಿ ತಾಲ್ಲೂಕು ಅಂಜುಟಗಿ ಸಮೀಪ ಶೀಘ್ರ ಸಾಯಿಸ್ವಾಸ್ಥ್ಯ ಕೇಂದ್ರ ಆರಂಭಿಸಿ ಜನರಿಗೆ ಆರೋಗ್ಯ ಸೇವೆ ಒದಗಿಸಲಾಗುವುದು. ಇನ್ನು 10 ವರ್ಷಗಳಲ್ಲಿ ನಮ್ಮ ಪ್ರಯತ್ನಗಳ ಪರಿಣಾಮ ಗೋಚರಿಸಲಿದೆ” ಎಂದು ಭರವಸೆ ನೀಡಿದರು.
ನಮ್ಮ ಗುರುಕುಲ ಇರುವ ಇಂಡಿ ತಾಲೂಕಿನ ಅಂಜುಟಗಿಯಲ್ಲಿ ಗೋಲ್‌ಗುಂಬಜ್‌ಗಿಂತಲೂ ದೊಡ್ಡದಾದ ಒಂದು ದೊಡ್ಡ ಸಭಾಭವನ ಕಟ್ಟುತ್ತಿದ್ದೇವೆ ಎಂದು ಸದ್ಗುರು ತಿಳಿಸಿದರು.

ಸೇವೆ ಮಾಡುವ ಕನಸು ನನ್ನದು: ಬಸವರಾಜ್

ವಿಜಯಪುರ ಜಿಲ್ಲೆ ಕನಮಡಿ ಗ್ರಾಮದ ವಿದ್ಯಾರ್ಥಿ ಬಸವರಾಜ್ ಮಾತನಾಡಿ, “ಬಡ ಕುಟುಂಬದಿಂದ ಬಂದ ನನಗೆ ಇಂಗ್ಲಿಷ್ ಮೀಡಿಯಂನಲ್ಲಿ ಓದುವ ಆಸೆಯಿತ್ತು. ಆದರೆ ಮನೆಯಲ್ಲಿ ಬಡತನ ಇದ್ದ ಕಾರಣ ಅದು ಸಾಧ್ಯವಾಗಿರಲಿಲ್ಲ. ಇಂಡಿ ತಾಲ್ಲೂಕಿನ ಸತ್ಯ ಸಾಯಿ ಪ್ರೇಮನಿಕೇತನಂ ಗುರುಕುಲಕ್ಕೆ ಬಂದ ನಂತರ ಒಳ್ಳೆಯ ಶಿಕ್ಷಣ ಪಡೆಯಬೇಕು ಎನ್ನುವ ನನ್ನ ಕನಸು ನನಸಾಯಿತು” ಎಂದು ನೆನಪಿಸಿಕೊಂಡರು.
“ಗುರುಕುಲದಲ್ಲಿ ಪರಾ ವಿದ್ಯೆಯಾದ ಭಗವದ್ಗೀತೆ, ಉಪನಿಷತ್, ವೇದ ಕಲಿಯುತ್ತೇವೆ. ಅಪರಾ ವಿದ್ಯೆಯಾದ ಕನ್ನಡ, ಗಣಿತ, ವಿಜ್ಞಾನವನ್ನೂ ಕಲಿಯುತ್ತೇವೆ ಎಂದು ಹೇಳಿದ ವಿದ್ಯಾರ್ಥಿ, ಮುಂದೆ ದೊಡ್ಡವನಾದ ಮೇಲೆ ಸದ್ಗುರುಗಳಂತೆ ನಾನೂ ಜನರ ಸೇವೆ ಮಾಡುತ್ತೇನೆ” ಎಂದು ತಮ್ಮ ಕನಸು ಹಂಚಿಕೊಂಡರು.

ಲಕ್ಷಾಂತರ ಬದುಕಿಗೆ ಅಸರೆಯಾದ ಸದ್ಗುರು

ಕಾರ್ಯಕ್ರಮದಲ್ಲಿ ತಮ್ಮ ಅನುಭವ ಹಂಚಿಕೊಂಡ ವಿಜಯಪುರ ಜಿಲ್ಲೆಯವರೇ ಆದ ಶ್ರೀ ಸತ್ಯ ಸಾಯಿ ಲೋಕ ಸೇವಾ ಗುರುಕುಲಂನ ಹಿರಿಯ ವಿದ್ಯಾರ್ಥಿ ಹಾಗೂ ಕೋಲಾರದ ಕೃಷಿ ವಿಜ್ಞಾನ ಕಾಲೇಜಿನ ಮುಖ್ಯಸ್ಥರಾಗಿರುವ ಸಿದ್ದರಾಮ, “ಸಂಸ್ಥೆಯು ನನ್ನ ಬದುಕಿಗೆ ಧ್ಯೇಯ ಕೊಟ್ಟಿತು. ನಾನು ಚಿಕ್ಕ ಬಾಲಕನಿದ್ದಾಗ ಸೇರಿಕೊಂಡ ಸಂಸ್ಥೆಯಲ್ಲಿ ಇಂದು 100 ಮಕ್ಕಳನ್ನು ನೋಡಿಕೊಳ್ಳುವ ಸೌಭಾಗ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳಿಗೆ ಸದ್ಗುರುಗಳಿಂದ ಪರಿವರ್ತನೆಯಾಗಿವೆ” ಎಂದು ಭಾವುಕರಾದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಎಬಿವಿಪಿ ಕಾರ್ಯಕರ್ತರಿಂದ ತಿರಂಗಾ ಯಾತ್ರೆ
    In (ರಾಜ್ಯ ) ಜಿಲ್ಲೆ
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.