Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐಕ್ಯತೆಯ ಪ್ರದರ್ಶನಕ್ಕೆ ಆ.28ರ ಸಮಾವೇಶ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ಐಕ್ಯತೆಯ ಪ್ರದರ್ಶನಕ್ಕೆ ಆ.28ರ ಸಮಾವೇಶ ಯಶಸ್ವಿಗೊಳಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದಲ್ಲಿ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ಅವರ ಸಮಸ್ಯೆಗಳ ಪರಿಹಾರಕ್ಕಾಗಿ ಐಕ್ಯತೆಯ ಪ್ರದರ್ಶನ ಅತ್ಯಗತ್ಯವಾಗಿದ್ದು, ಆಗಸ್ಟ್ 28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್ (ಗೇಟ್ ನಂ. 8)ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ಜಾಗೃತ ನೌಕರರ ರಾಜ್ಯಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ್ ಕರೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು, ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯಮಟ್ಟದ ಸಮಾವೇಶದ ಪೂರ್ವಸಿದ್ಧತೆ ಹಾಗೂ ಕಾರ್ಯಕ್ರಮದ ರೂಪರೇಷೆಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವಿಶೇಷವಾಗಿ ಎಸ್‌ಸಿ/ಎಸ್‌ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ ನಡೆಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಎಲ್ಲರೂ ಐಕ್ಯತೆಯಿಂದ ಒಂದೇ ವೇದಿಕೆಯಲ್ಲಿ ಸೇರುವುದು ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಂದು ಜಿಲ್ಲೆಯಿಂದ ಸಮಿತಿಯ ಪದಾಧಿಕಾರಿಗಳು, ಅಧ್ಯಕ್ಷರು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಅಧ್ಯಕ್ಷ ಬಿ.ಎಚ್. ನಾಡಗಿರಿ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಸಿ/ಎಸ್‌ಟಿ ನೌಕರರನ್ನು ಸಮಾವೇಶಕ್ಕೆ ಕರೆದೊಯ್ಯುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ , ಹಿರಿಯ ಉಪಾಧ್ಯಕ್ಷ ಆರ್. ಮೋಹನ್, ಸದಸ್ಯ ದ್ವಾರಕನಾಥ್, ಬಸಂತ್ ಗುಣದಾಳ, ಡಾ. ಸೂರ್ಯಕಾಂತ ಹೊಸಮನಿ, ಮಹೇಶ್ ಹೊನ್ನಾಕಟ್ಟಿ, ಮುದ್ದಣ್ಣ ಭೀಮನಗರ, ರವಿ ಯಲಡಗಿ, ನಿಜು ಮೇಲಿನಕೇರಿ, ಆರ್.ಬಿ. ಬಡಿಗೇರ್, ಎಸ್.ಎಂ. ದೋಣಿ, ಜಿ.ಎಂ. ಚೆಲುವಾದಿ, ನೀಲಕಂಠ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.